Genesis 42:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೋಸೇಫನು ತನ್ನ ಅಣ್ಣಂದಿರ ಬಗ್ಗೆ ತಾನು ಕಂಡಿದ್ದ ಕನಸುಗಳ ಬಗ್ಗೆ ಜ್ಞಾಪಿಸಿಕೊಂಡು ಅವರಿಗೆ, “ನೀವು ಆಹಾರವನ್ನು ಕೊಂಡುಕೊಳ್ಳಲು ಬಂದಿಲ್ಲ; ನೀವು ಗೂಢಚಾರರು. ನಮ್ಮ ದೇಶದ ದುರ್ಬಲ ಸ್ಥಳಗಳನ್ನು ತಿಳಿದುಕೊಳ್ಳಲು ಬಂದಿರುವಿರಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಸೇಫನು ಅವರ ವಿಷಯದಲ್ಲಿ ತನಗೆ ಬಿದ್ದ ಕನಸುಗಳನ್ನು ನೆನಪಿಗೆ ತಂದುಕೊಂಡನು. ಅವರಿಗೆ ಅವನು, “ನೀವು ಗೂಢಚಾರರು. ನಮ್ಮ ದೇಶದ ಭದ್ರತೆಯಿಲ್ಲದ ಸ್ಥಳಗಳನ್ನು ನೋಡುವುದಕ್ಕಾಗಿ ಬಂದವರು” ಎಂದು ಹೇಳಿದನು.
Kannada BSI Bible 2016
ಆಗ ಯೋಸೇಫನು ತಾನು ಅವರ ವಿಷಯದಲ್ಲಿ ಕಂಡ ಕನಸುಗಳನ್ನು ಜ್ಞಾಪಕಮಾಡಿಕೊಂಡು ಅವ ರಿಗೆ--ನೀವು ಗೂಢಚಾರರು; ದೇಶದ ಒಳಗುಟ್ಟನ್ನು ನೋಡುವದಕ್ಕಾಗಿ ಬಂದಿದ್ದೀರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಅವರ ವಿಷಯ ತನಗೆ ಬಿದ್ದ ಕನಸುಗಳನ್ನು ನೆನಪಿಗೆ ತಂದುಕೊಂಡು ಅವರಿಗೆ - ನೀವು ಗೂಢಚಾರರು; ನಮ್ಮ ದೇಶದ ದುರ್ಬಲ ಸ್ಥಳಗಳನ್ನು ನೋಡಿಕೊಳ್ಳುವದಕ್ಕಾಗಿ ಬಂದವರು ಎಂದು ಹೇಳಲು,
Kannada Bible (KNCL) BSI 2016
ಅವರ ವಿಷಯವಾಗಿ ತಾನು ಕಂಡಿದ್ದ ಕನಸುಗಳನ್ನು ಜೋಸೆಫನು ನೆನಪಿಗೆ ತಂದುಕೊಂಡನು. ಅವರನ್ನು ನೋಡಿ, “ನೀವು ಗೂಢಚಾರರು; ನಮ್ಮ ದೇಶದ ದುರ್ಬಲ ಸ್ಥಳಗಳನ್ನು ಪತ್ತೆಹಚ್ಚುವುದಕ್ಕಾಗಿ ಬಂದವರು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೋಸೇಫನು ತನ್ನ ಸಹೋದರರನ್ನು ನೋಡಿ ಅವರನ್ನು ಗುರುತಿಸಿದರೂ ಆಗ ಯೋಸೇಫನು ತಾನು ಅವರ ವಿಷಯದಲ್ಲಿ ಕಂಡ ಕನಸುಗಳನ್ನು ಜ್ಞಾಪಕಮಾಡಿಕೊಂಡು ಅವರಿಗೆ, “ನೀವು ಗೂಢಚಾರರು, ದೇಶದ ಒಳಗುಟ್ಟನ್ನು ನೋಡುವುದಕ್ಕೆ ಬಂದಿದ್ದೀರಿ,” ಎಂದನು.