Genesis 43:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಸಹೋದರರಿಗೆ ಭಯವಾಯಿತು. ಅವರು, “ಕಳೆದ ಸಲ ನಮ್ಮ ಚೀಲಗಳಿಗೆ ಮತ್ತೆ ಹಾಕಿದ್ದ ಹಣದ ಕಾರಣದಿಂದಾಗಿ ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದಿದ್ದಾರೆ. ನಮ್ಮನ್ನು ತಪ್ಪಿತಸ್ಥರೆಂದು ನಿರ್ಣಯಿಸಿ ನಮ್ಮ ಕತ್ತೆಗಳನ್ನು ವಶಮಾಡಿಕೊಳ್ಳುವರು; ನಮ್ಮನ್ನೂ ಗುಲಾಮರನ್ನಾಗಿ ಮಾಡಿಕೊಳ್ಳುವರು” ಎಂದು ಮಾತಾಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಸೇಫನ ಮನೆಗೆ ಕರೆತಂದದ್ದರಿಂದ ಅವರು ಭಯಪಟ್ಟು, “ಮೊದಲನೆಯ ಸಾರಿ ನಮ್ಮ ಚೀಲಗಳಲ್ಲಿ ಹಿಂದಕ್ಕೆ ತೆಗೆದುಕೊಂಡು ಹೋದ ಹಣದ ನಿಮಿತ್ತವೇ ಅವನು ನಮ್ಮನ್ನು ತನ್ನ ಮನೆಯೊಳಗೆ ಕರೆಸಿದ್ದಾನೆ. ನಮ್ಮ ಮೇಲೆ ಫಕ್ಕನೆ ಬಿದ್ದು, ನಮ್ಮನ್ನೂ, ನಮ್ಮ ಕತ್ತೆಗಳನ್ನೂ ತೆಗೆದುಕೊಂಡು ನಮ್ಮನ್ನು ದಾಸರನ್ನಾಗಿ ಮಾಡಿಕೊಳ್ಳಲು ಇಲ್ಲಿಗೆ ಕರೆಸಿದ್ದಾನೆ” ಎಂದುಕೊಂಡರು.
Kannada BSI Bible 2016
ಅವರು ಯೋಸೇಫನ ಮನೆಗೆ ತರಲ್ಪಟ್ಟಿದ್ದರಿಂದ ಭಯಪಟ್ಟು--ಹಿಂದೆ ನಮ್ಮ ಚೀಲಗಳಲ್ಲಿ ತಿರಿಗಿ ಸೇರಿದ ಹಣಕ್ಕಾಗಿ ನಮ್ಮನ್ನು ಹಿಡಿದು ನಮ್ಮ ಮೇಲೆ ಬಿದ್ದು ನಮ್ಮನ್ನು ದಾಸರನ್ನಾಗಿಮಾಡಿ ನಮ್ಮ ಕತ್ತೆಗಳನ್ನು ತಕ್ಕೊಳ್ಳುವದಕ್ಕೆ ನಮ್ಮನ್ನು ಇಲ್ಲಿಗೆ ತಂದಿದ್ದಾನೆ ಎಂದು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮುಂಚೆ ನಾವು ಚೀಲಗಳಲ್ಲಿ ಹಿಂದಕ್ಕೆ ತೆಗೆದುಕೊಂಡು ಹೋದ ಹಣದ ನಿವಿುತ್ತವೇ ಅವನು ನಮ್ಮನ್ನು ತನ್ನ ಮನೆಯೊಳಗೆ ಕರೆಸಿದ್ದಾನೆ; ನಮ್ಮ ಮೇಲೆ ಫಕ್ಕನೆ ಬಿದ್ದು ನಮ್ಮನ್ನು ಕತ್ತೆಗಳ ಸಹಿತವಾಗಿ ಹಿಡಿಸಿ ಗುಲಾಮರನ್ನಾಗಿ ಮಾಡಿಕೊಳ್ಳಬೇಕೆಂದಿದ್ದಾನೆ ಎಂಬದಾಗಿ ತಮ್ಮ ತಮ್ಮೊಳಗೆ ಮಾತಾಡಿಕೊಂಡು
Kannada Bible (KNCL) BSI 2016
ಅಲ್ಲಿಗೆ ಹೋಗುತ್ತಿದ್ದ ಅವರಿಗೆ ಭಯವಾಯಿತು. “ಹಿಂದೆ ನಾವು ಚೀಲಗಳಲ್ಲಿ ವಾಪಸ್ಸು ತೆಗೆದುಕೊಂಡು ಹೋದ ಹಣದ ಪ್ರಯುಕ್ತವೇ ಅವನು ನಮ್ಮನ್ನು ತನ್ನ ಮನೆಯೊಳಗೆ ಕರೆಸಿದ್ದಾನೆ; ದಿಢೀರನೆ ನಮ್ಮ ಮೇಲೆ ಬಿದ್ದು ನಮ್ಮನ್ನು ಗುಲಾಮರನ್ನಾಗಿಸಿಕೊಳ್ಳಬಹುದು. ನಮ್ಮ ಕತ್ತೆಗಳನ್ನು ಹಿಡಿದುಕೊಳ್ಳಬಹುದು,” ಎಂಬುದಾಗಿ ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಸೇಫನ ಮನೆಗೆ ಕರೆತಂದದ್ದರಿಂದ ಅವರು ಭಯಪಟ್ಟು, “ಹಿಂದೆ ನಮ್ಮ ಚೀಲಗಳಲ್ಲಿ ತಿರುಗಿ ಸೇರಿದ ಹಣಕ್ಕಾಗಿ ನಮ್ಮನ್ನು ಹಿಡಿದು, ನಮ್ಮ ಮೇಲೆ ಬಿದ್ದು, ನಮ್ಮನ್ನು ದಾಸರಾಗಿ ಮಾಡಿ, ನಮ್ಮ ಕತ್ತೆಗಳನ್ನು ತೆಗೆದುಕೊಳ್ಳುವುದಕ್ಕೆ ನಮ್ಮನ್ನು ಇಲ್ಲಿಗೆ ತಂದಿದ್ದಾನೆ,” ಎಂದರು.