Genesis 43:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮನೆಗೆ ಹೋಗುವಾಗ ದಾರಿಯಲ್ಲಿ ನಾವು ನಮ್ಮ ಚೀಲಗಳನ್ನು ಬಿಚ್ಚಿದಾಗ ಪ್ರತಿಯೊಂದು ಚೀಲದಲ್ಲಿಯೂ ನಾವು ಪಾವತಿಮಾಡಿದ್ದ ಹಣವನ್ನು ಕಂಡೆವು. ಆ ಹಣವು ಅಲ್ಲಿಗೆ ಹೇಗೆ ಬಂತೋ ನಮಗೆ ಗೊತ್ತಿಲ್ಲ. ಆದರೆ ಆ ಹಣವನ್ನು ನಿಮಗೆ ಕೊಡುವುದಕ್ಕಾಗಿ ನಮ್ಮೊಂದಿಗೆ ತೆಗೆದುಕೊಂಡು ಬಂದಿದ್ದೇವೆ. ಈ ಸಲ ನಾವು ಖರೀದಿ ಮಾಡಬೇಕೆಂದಿರುವ ಆಹಾರಕ್ಕೆ ಕೊಡಲು ಹೆಚ್ಚು ಹಣವನ್ನು ತಂದಿದ್ದೇವೆ” ಎಂದು ಹೇಳಿದರು. (Verses 21-22)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಹೊರಟುಹೋದ ನಂತರ ಇಳಿದುಕೊಂಡಿದ್ದ ಸ್ಥಳದಲ್ಲಿ ನಮ್ಮ ಚೀಲಗಳನ್ನು ಬಿಚ್ಚಿ ನೋಡಿದಾಗ ಪ್ರತಿಯೊಬ್ಬನ ಹಣವು ತೂಕದಲ್ಲಿ ಏನೂ ಕಡಿಮೆಯಿಲ್ಲದೆ ನಮ್ಮ ನಮ್ಮ ಚೀಲದಲ್ಲೇ ಇತ್ತು. ಅದನ್ನು ಹಿಂತಿರುಗಿಸಲು ತಂದಿದ್ದೇವೆ.
Kannada BSI Bible 2016
ಇದಾದ ಮೇಲೆ ನಾವು ವಸತಿಗೃಹಕ್ಕೆ ಬಂದು ನಮ್ಮ ಚೀಲಗಳನ್ನು ತೆರೆದಾಗ ಇಗೋ, ಪ್ರತಿಯೊಬ್ಬನ ಹಣವು ಅದರದರ ತೂಕದ ಪ್ರಕಾರ ಹಣವು ಅವನವನ ಚೀಲದಲ್ಲೇ ಇತ್ತು. ನಮ್ಮ ಕೈಗಳಲ್ಲಿ ಅದನ್ನು ತಿರಿಗಿ ತೆಗೆದುಕೊಂಡು ಬಂದಿದ್ದೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಹೊರಟುಹೋದ ನಂತರ ಇಳಿದುಕೊಂಡಿದ್ದ ಒಂದು ಸ್ಥಳದಲ್ಲಿ ನಮ್ಮ ಚೀಲಗಳನ್ನು ಬಿಚ್ಚಿ ನೋಡಿದಾಗ ಪ್ರತಿಯೊಬ್ಬನ ಹಣವು ತೂಕದಲ್ಲಿ ಏನೂ ಕಡಿಮೆಯಿಲ್ಲದೆ ಅವನವನ ಚೀಲದಲ್ಲೇ ಇತ್ತು; ಅದನ್ನು ತಿರಿಗಿ ತಂದಿದ್ದೇವೆ.
Kannada Bible (KNCL) BSI 2016
ನಾವು ಹೊರಟುಹೋದ ನಂತರ ಚಾವಡಿಯೊಂದರಲ್ಲಿ ಇಳಿದುಕೊಂಡೆವು. ಅಲ್ಲಿ ನಮ್ಮ ಚೀಲಗಳನ್ನು ಬಿಚ್ಚಿನೋಡಿದಾಗ ಪ್ರತಿ ಒಬ್ಬನ ಹಣ, ತೂಕ ಕಿಂಚಿತ್ತೂ ಕಡಿಮೆಯಿಲ್ಲದೆ, ಅವನವನ ಚೀಲದಲ್ಲೇ ಇತ್ತು. ಅದನ್ನು ವಾಪಸ್ಸು ತಂದಿದ್ದೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಾದ ಮೇಲೆ ನಾವು ವಸತಿಗೃಹಕ್ಕೆ ಬಂದು ನಮ್ಮ ಚೀಲಗಳನ್ನು ತೆರೆದಾಗ, ಪ್ರತಿಯೊಬ್ಬನ ಹಣವು ಅವನವನ ಚೀಲದ ಬಾಯಲ್ಲಿ ಇತ್ತು. ನಮ್ಮ ಕೈಗಳಲ್ಲಿ ಅದನ್ನು ತಿರುಗಿ ತೆಗೆದುಕೊಂಡು ಬಂದಿದ್ದೇವೆ.