Genesis 43:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದಕ್ಕೆ ಸೇವಕನು, “ಭಯಪಡಬೇಡಿ, ಚಿಂತಿಸಬೇಡಿ. ನಿಮ್ಮ ದೇವರೂ ನಿಮ್ಮ ತಂದೆಯ ದೇವರೂ ಹಣವನ್ನು ಉಡುಗೊರೆಯಾಗಿ ನಿಮ್ಮ ಚೀಲಗಳಲ್ಲಿ ಇಟ್ಟಿದ್ದಿರಬೇಕು. ಕಳೆದ ಸಲ ನೀವು ದವಸಧಾನ್ಯಗಳಿಗಾಗಿ ಹಣ ಪಾವತಿ ಮಾಡಿದ್ದು ನನಗೆ ನೆನಪಿದೆ” ಎಂದು ಹೇಳಿದನು. ಬಳಿಕ ಆ ಸೇವಕನು ಸಿಮೆಯೋನನನ್ನು ಸೆರೆಮನೆಯಿಂದ ಕರೆತಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅವನು, “ನೀವು ಸಮಾಧಾನವಾಗಿರಿ. ನೀವೇನೂ ಭಯಪಡಬೇಡಿರಿ ನಿಮಗೂ ನಿಮ್ಮ ತಂದೆಗೂ ದೇವರಾಗಿರುವಾತನು ನಿಮ್ಮ ಚೀಲಗಳಲ್ಲಿ ಹಣವನ್ನು ಇಟ್ಟಿರಬೇಕು. ನಿಮ್ಮ ಹಣವು ನನಗೆ ಮುಟ್ಟಿತು” ಎಂದು ಹೇಳಿ, ಅವನು ಸಿಮೆಯೋನನನ್ನು ಅವರ ಬಳಿಗೆ ಕರೆದುಕೊಂಡು ಬಂದನು.
Kannada BSI Bible 2016
ಅದಕ್ಕವನು--ನಿಮಗೆ ಸಮಾಧಾನವಿರಲಿ, ಭಯ ಪಡಬೇಡಿರಿ. ನಿಮ್ಮ ದೇವರೂ ನಿಮ್ಮ ತಂದೆಯ ದೇವರೂ ನಿಮ್ಮ ಚೀಲಗಳಲ್ಲಿ ನಿಮಗೆ ದ್ರವ್ಯವನ್ನು ಕೊಟ್ಟಿದ್ದಾನೆ. ನಿಮ್ಮ ಹಣವು ನನಗೆ ಮುಟ್ಟಿತು ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ತಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಅವನು - ಸಮಾಧಾನವಾಗಿರ್ರಿ. ನೀವೇನೂ ಹೆದರಬೇಡಿರಿ; ನಿಮ್ಮ ತಂದೆಗೂ ನಿಮಗೂ ದೇವರಾಗಿರುವಾತನು ನಿಮ್ಮ ಚೀಲಗಳಲ್ಲಿಯೇ ನಿಕ್ಷೇಪ ಸಿಕ್ಕುವಂತೆ ಅನುಗ್ರಹಿಸಿದ್ದಾನೆ; ನಿಮ್ಮ ಹಣವು ನನಗೆ ಮುಟ್ಟಿತು ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ಕರೆದುಕೊಂಡು ಬಂದು
Kannada Bible (KNCL) BSI 2016
ಅದಕ್ಕೆ ಆ ಗೃಹನಿರ್ವಾಹಕ, “ಸಮಾಧಾನದಿಂದಿರಿ, ಹೆದರಬೇಡಿ. ನಿಮ್ಮ ತಂದೆಗೂ ನಿಮಗೂ ದೇವರಾದವರು ನಿಮ್ಮ ಚೀಲಗಳಲ್ಲಿಯೇ ನಿಧಿ ನಿಕ್ಷೇಪ ದೊರಕುವಂತೆ ಅನುಗ್ರಹಿಸಿದ್ದಾರೆ; ನೀವು ಕೊಟ್ಟ ಹಣ ನನಗೆ ಮುಟ್ಟಿದೆ,” ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ಕರೆದುಕೊಂಡು ಬಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕವನು, “ನಿಮಗೆ ಸಮಾಧಾನವಿರಲಿ, ಭಯಪಡಬೇಡಿರಿ. ನಿಮ್ಮ ದೇವರೂ ನಿಮ್ಮ ತಂದೆಯ ದೇವರೂ ನಿಮ್ಮ ಚೀಲಗಳಲ್ಲಿ ನಿಮಗೆ ನಿಕ್ಷೇಪವನ್ನು ಕೊಟ್ಟಿದ್ದಾರೆ. ನಿಮ್ಮ ಹಣವು ನನಗೆ ಮುಟ್ಟಿದೆ,” ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ತಂದನು.