Genesis 43:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೇವಕನು ಅವರನ್ನು ಯೋಸೇಫನ ಮನೆಯೊಳಗೆ ಕರೆದುಕೊಂಡು ಹೋಗಿ ಅವರಿಗೆ ನೀರನ್ನು ಕೊಟ್ಟನು. ಅವರು ತಮ್ಮ ಕಾಲುಗಳನ್ನು ತೊಳೆದುಕೊಂಡರು. ಬಳಿಕ ಅವನು ಅವರ ಕತ್ತೆಗಳಿಗೆ ಆಹಾರವನ್ನು ಹಾಕಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರೆಲ್ಲರನ್ನೂ ಯೋಸೇಫನ ಮನೆಯೊಳಗೆ ಕರೆದುಕೊಂಡು ಬಂದನು. ಕಾಲುಗಳನ್ನು ತೊಳೆಯುವುದಕ್ಕೆ ನೀರನ್ನು ಕೊಡಿಸಿ, ಅವರ ಕತ್ತೆಗಳಿಗೂ ಮೇವು ಹಾಕಿಸಿದನು.
Kannada BSI Bible 2016
ಆ ಮನುಷ್ಯನು ಅವರನ್ನು ಯೋಸೇಫನ ಮನೆಯೊಳಗೆ ಕರಕೊಂಡು ಬಂದು ಅವರಿಗೆ ನೀರನ್ನು ಕೊಟ್ಟಾಗ ಅವರು ತಮ್ಮ ಕಾಲುಗಳನ್ನು ತೊಳ ಕೊಂಡರು. ಇದಲ್ಲದೆ ಅವರ ಕತ್ತೆಗಳಿಗೆ ಮೇವನ್ನು ಹಾಕಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರೆಲ್ಲರನ್ನೂ ಯೋಸೇಫನ ಮನೆಯೊಳಗೆ ಸೇರಿಸಿ ಕಾಲುಗಳನ್ನು ತೊಳೆಯುವದಕ್ಕೆ ನೀರನ್ನು ಕೊಡಿಸಿ ಅವರ ಕತ್ತೆಗಳಿಗೆ ಮೇವು ಹಾಕಿಸಿದನು.
Kannada Bible (KNCL) BSI 2016
ಆಮೇಲೆ ಗೃಹನಿರ್ವಾಹಕನು ಅವರೆಲ್ಲರನ್ನು ಜೋಸೆಫನ ಮನೆಯೊಳಗೆ ಕರೆತಂದು ಕಾಲು ತೊಳೆದುಕೊಳ್ಳುವುದಕ್ಕೆ ನೀರನ್ನು ಕೊಡಿಸಿದನು. ಅವರ ಕತ್ತೆಗಳಿಗೆ ಮೇವು ಹಾಕಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಮನುಷ್ಯನು ಅವರನ್ನು ಯೋಸೇಫನ ಮನೆಯೊಳಗೆ ಕರೆದುಕೊಂಡು ಬಂದು ಅವರಿಗೆ ನೀರನ್ನು ಕೊಟ್ಟಾಗ, ಅವರು ತಮ್ಮ ಕಾಲುಗಳನ್ನು ತೊಳೆದುಕೊಂಡರು. ಇದಲ್ಲದೆ ಅವರ ಕತ್ತೆಗಳಿಗೆ ಮೇವನ್ನು ಹಾಕಿದನು.