Genesis 43:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತಾವು ಯೋಸೇಫನೊಂದಿಗೆ ಊಟ ಮಾಡುವುದಾಗಿ ಸಹೋದರರಿಗೆ ತಿಳಿಯಿತು. ಆದ್ದರಿಂದ ಅವರು ಅವನಿಗೆ ಕೊಡಲು ತಮ್ಮ ಉಡುಗೊರೆಗಳನ್ನು ಮಧ್ಯಾಹ್ನದವರೆಗೆ ಸಿದ್ಧಪಡಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಾವು ಅಲ್ಲೇ ಊಟ ಮಾಡಬೇಕೆಂಬ ಸಂಗತಿಯನ್ನು ಅವರು ಕೇಳಿದ್ದರಿಂದ ತಾವು ತಂದಿದ್ದ ಕಾಣಿಕೆಯನ್ನು ಯೋಸೇಫನಿಗೆ ಕೊಡಲು ಸಿದ್ಧಮಾಡಿಕೊಂಡರು.
Kannada BSI Bible 2016
ಅವರು ಅಲ್ಲಿ ಊಟಮಾಡಬೇಕೆಂದು ಕೇಳಿದ್ದರಿಂದ ಯೋಸೇಫನು ಮಧ್ಯಾಹ್ನದಲ್ಲಿ ಮನೆಗೆ ಬರುವಷ್ಟರಲ್ಲಿ ಕಾಣಿಕೆಯನ್ನು ಸಿದ್ಧಮಾಡಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಾವು ಅಲ್ಲೇ ಊಟ ಮಾಡಬೇಕೆಂಬುವ ಸಂಗತಿಯನ್ನು ಅವರು ಕೇಳಿದ್ದರಿಂದ ತಾವು ತಂದಿದ್ದ ಕಾಣಿಕೆಯನ್ನು ಸಿದ್ಧವಾಗಿ ಇಟ್ಟುಕೊಂಡು ಯೋಸೇಫನು ಮಧ್ಯಾಹ್ನದಲ್ಲಿ ಬರುವ ತನಕ ಕಾದು ಕೊಂಡಿದ್ದರು.
Kannada Bible (KNCL) BSI 2016
ತಾವು ಅಲ್ಲೇ ಊಟಮಾಡಬೇಕೆಂಬ ಸಂಗತಿ ಅವರಿಗೆ ತಿಳಿಯಿತು. ಆದ್ದರಿಂದ ತಾವು ತಂದಿದ್ದ ಕಾಣಿಕೆಯನ್ನು ಸಿದ್ಧವಾಗಿ ಇಟ್ಟುಕೊಂಡರು. ಜೋಸೆಫನು ಬರುವ ತನಕ, ಮಧ್ಯಾಹ್ನದವರೆಗೆ ಕಾದುಕೊಂಡಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಅಲ್ಲಿ ಊಟ ಮಾಡಬೇಕೆಂದು ಕೇಳಿದ್ದರಿಂದ, ಯೋಸೇಫನು ಮಧ್ಯಾಹ್ನದಲ್ಲಿ ಮನೆಗೆ ಬರುವಷ್ಟರಲ್ಲಿ ಕಾಣಿಕೆಯನ್ನು ಸಿದ್ಧಮಾಡಿಕೊಂಡರು.