Genesis 43:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಸೇಫನು ಮನೆಗೆ ಬಂದಾಗ, ಸಹೋದರರು ತಾವು ತಂದಿದ್ದ ಉಡುಗೊರೆಗಳನ್ನು ಅವನಿಗೆ ಕೊಟ್ಟರು. ಬಳಿಕ ಅವರು ನೆಲದವರೆಗೆ ಬಾಗಿ ನಮಸ್ಕರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಸೇಫನು ಮನೆಗೆ ಬಂದಾಗ, ಅವರು ತಮ್ಮ ಕೈಯಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತಂದು, ಅವನಿಗೆ ಕೊಟ್ಟು, ಅವನ ಮುಂದೆ ಅಡ್ಡಬಿದ್ದರು.
Kannada BSI Bible 2016
ಯೋಸೇಫನು ಮನೆಗೆ ಬಂದ ಮೇಲೆ ತಮ್ಮ ಕೈಗಳಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತಕ್ಕೊಂಡು ಬಂದು ನೆಲದ ಮಟ್ಟಿಗೂ ಅವನಿಗೆ ಅಡ್ಡಬಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಸೇಫನು ಮನೆಗೆ ಬಂದಾಗ ಅವರು ಕಾಣಿಕೆಯನ್ನು ಮನೆಯೊಳಕ್ಕೆ ತಂದುಕೊಟ್ಟು ಅವನ ಮುಂದೆ ಅಡ್ಡಬಿದ್ದರು.
Kannada Bible (KNCL) BSI 2016
ಜೋಸೆಫನು ಮನೆಗೆ ಬಂದಾಗ ಅವರು ಅವನಿಗೆ ಕಾಣಿಕೆಯನ್ನು ತಂದುಕೊಟ್ಟು, ಅವನ ಮುಂದೆ ನೆಲದವರೆಗೂ ಬಾಗಿ ನಮಸ್ಕರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಸೇಫನು ಮನೆಗೆ ಬಂದ ಮೇಲೆ, ತಮ್ಮ ಕೈಗಳಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತೆಗೆದುಕೊಂಡು ಬಂದು, ಅವನಿಗೆ ನೆಲದವರೆಗೂ ಅಡ್ಡಬಿದ್ದರು.