Genesis 43:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಸೇಫನು ಅವರ ಯೋಗಕ್ಷೇಮವನ್ನು ವಿಚಾರಿಸಿದನು. ಯೋಸೇಫನು “ನೀವು ನನಗೆ ತಿಳಿಸಿದ ನಿಮ್ಮ ವೃದ್ಧನಾದ ತಂದೆ ಕ್ಷೇಮವಾಗಿದ್ದಾನೆಯೇ? ಇನ್ನೂ ಜೀವಂತವಾಗಿರುವನೇ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅವರ ಯೋಗ ಕ್ಷೇಮವನ್ನು ವಿಚಾರಿಸಿ ಅವರಿಗೆ ಹೇಳಿದ್ದೇನೆಂದರೆ, “ನೀವು ಹೇಳಿದ, ಮುದುಕನಾಗಿರುವ ನಿಮ್ಮ ತಂದೆ ಕ್ಷೇಮವೋ? ಅವನು ಇನ್ನೂ ಬದುಕಿದ್ದಾನೋ?” ಎಂದು ಕೇಳಿದನು.
Kannada BSI Bible 2016
ಆಗ ಅವನು ಅವರ ಕ್ಷೇಮಸಮಾಚಾರವನ್ನು ಕೇಳಿ ನೀವು ಹೇಳಿದ ಮುದುಕನಾದ ನಿಮ್ಮ ತಂದೆಗೆ ಕ್ಷೇಮವಿದೆಯೋ? ಅವನು ಇನ್ನೂ ಬದುಕಿದ್ದಾನೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಅವರ ಯೋಗಕ್ಷೇಮವನ್ನು ವಿಚಾರಿಸಿ - ನೀವು ಹೇಳಿದ ಮುದುಕನಾಗಿರುವ ನಿಮ್ಮ ತಂದೆಗೆ ಕ್ಷೇಮವೋ? ಅವನು ಇನ್ನೂ ಬದುಕಿದ್ದಾನೋ ಎಂದು ಕೇಳಲು ಅವರು ಬೊಗ್ಗಿ ನಮಸ್ಕಾರಮಾಡಿ -
Kannada Bible (KNCL) BSI 2016
ಅವನು ಅವರ ಯೋಗಕ್ಷೇಮವನ್ನು ವಿಚಾರಿಸಿದನು. ಬಳಿಕ, “ನೀವು ಹೇಳಿದ ಮುಪ್ಪುವಯಸ್ಸಿನ ನಿಮ್ಮ ತಂದೆ ಕ್ಷೇಮವೋ? ಇನ್ನು ಬದುಕಿದ್ದಾನೋ?\ ಎಂದು ಕೇಳಲು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೋಸೇಫನು ಅವರ ಕ್ಷೇಮಸಮಾಚಾರವನ್ನು ಕೇಳಿ, “ನೀವು ಹೇಳಿದ ವೃದ್ಧನಾದ ನಿಮ್ಮ ತಂದೆ ಕ್ಷೇಮವೋ? ಅವನು ಇನ್ನೂ ಬದುಕಿದ್ದಾನೋ?” ಎಂದನು.