Genesis 43:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದನು ಯಾಕೋಬನಿಗೆ, “ಆ ದೇಶದ ರಾಜ್ಯಪಾಲನು ನಮಗೆ ಎಚ್ಚರಿಕೆ ಕೊಟ್ಟಿದ್ದಾನೆ. ಅವನು, ‘ನೀವು ನಿಮ್ಮ ಸಹೋದರನನ್ನು ನನ್ನ ಬಳಿಗೆ ಕರೆದುಕೊಂಡು ಬಾರದೆ ನನ್ನನ್ನು ಭೇಟಿಯಾಗಕೂಡದು’ ಎಂದು ಹೇಳಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಯೆಹೂದನು ತನ್ನ ತಂದೆಗೆ ಹೇಳಿದ್ದೇನಂದರೆ, “ಆ ಮನುಷ್ಯನು ನಮಗೆ ‘ನಿಮ್ಮ ತಮ್ಮನನ್ನು ಕರೆದುಕೊಂಡು ಬಂದ ಹೊರತು ನನ್ನ ಮುಖವನ್ನು ನೋಡಬಾರದು’ ಎಂದು ಖಂಡಿತವಾಗಿ” ಹೇಳಿದ್ದಾನೆ.
Kannada BSI Bible 2016
ಆಗ ಯೆಹೂದನು ಅವನಿಗೆ--ಆ ಮನುಷ್ಯನು ನಮಗೆ--ನಿಮ್ಮ ತಮ್ಮನನ್ನು ನಿಮ್ಮ ಸಂಗಡ ಕರಕೊಂಡುಬಾರದ ಹೊರತು ನೀವು ನನ್ನ ಮುಖ ವನ್ನು ನೋಡಬಾರದೆಂದು ನಮಗೆ ಖಂಡಿತವಾಗಿ ಹೇಳಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಯೆಹೂದನು - ಆ ಮನುಷ್ಯನು ನಮಗೆ, ನಿಮ್ಮ ತಮ್ಮನನ್ನು ಕರಕೊಂಡುಬಂದ ಹೊರತು ನನ್ನ ಮುಖವನ್ನು ನೋಡಕೂಡದು ಎಂದು ಖಂಡಿತವಾಗಿ ಹೇಳಿದನಲ್ಲಾ.
Kannada Bible (KNCL) BSI 2016
ಅದಕ್ಕೆ ಯೆಹೂದನು ಹೀಗೆಂದನು: “ಆ ಮನುಷ್ಯ ನಮಗೆ, ‘ನಿಮ್ಮ ತಮ್ಮನನ್ನು ಕರೆದುಕೊಂಡು ಬಂದ ಹೊರತು ನನ್ನ ದರ್ಶನಕ್ಕೆ ಬರಕೂಡದು’ ಎಂದು ಕಡುಖಂಡಿತವಾಗಿ ಹೇಳಿಬಿಟ್ಟಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೂದನು ಅವನಿಗೆ, “ಆ ಮನುಷ್ಯನು ನಮಗೆ ನಿಮ್ಮ ಸಹೋದರನು ನಿಮ್ಮ ಸಂಗಡ ಇದ್ದ ಹೊರತು, ನೀವು ನನ್ನ ಮುಖವನ್ನು ನೋಡಬಾರದೆಂದು, ನಮಗೆ ದೃಢವಾಗಿ ನಿರ್ಣಯಿಸಿ ಹೇಳಿದ್ದಾನೆ.