Genesis 43:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಸೇಫನು ತನ್ನ ತಮ್ಮನಾದ ಬೆನ್ಯಾಮೀನನನ್ನು ಬಹಳವಾಗಿ ಪ್ರೀತಿಸುತ್ತಿದ್ದ ಕಾರಣ ಆನಂದದಿಂದ ಅವನ ಕಣ್ಣಲ್ಲಿ ನೀರು ಉಕ್ಕೇರಿ ಬಂದದ್ದರಿಂದ ಕೋಣೆಯೊಳಗೆ ಹೋಗಿ ಕಣ್ಣೀರಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಸೇಫನು ಅವಸರವಾಗಿ ಎದ್ದು ತನ್ನ ಕೋಣೆಯೊಳಗೆ ಹೋದನು. ಏಕೆಂದರೆ ತನ್ನ ಕರಳು ತಮ್ಮನ ಮೇಲೆ ಮರುಗಿದ್ದರಿಂದ ಅವನು ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.
Kannada BSI Bible 2016
ಆಗ ಯೋಸೇಫನ ಕರುಳು ತನ್ನ ತಮ್ಮನ ಮೇಲೆ ಮರುಗಿದ್ದರಿಂದ ಅವನು ಅವಸರದಲ್ಲಿ ಎದ್ದು ಅಳುವದಕ್ಕೆ ಸ್ಥಳವನ್ನು ಹುಡುಕಿ ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಸೇಫನಿಗೆ ತಮ್ಮನ ಮೇಲೆ ಕರುಳು ಮರುಗಿದ್ದರಿಂದ ಅವನು ಬೇಗನೆ ಎದ್ದು ಅಳುವದಕ್ಕೆ ಸ್ಥಳವನ್ನು ನೋಡಿಕೊಂಡು ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.
Kannada Bible (KNCL) BSI 2016
ಜೋಸೆಫನಿಗೆ ತಮ್ಮನನ್ನು ನೋಡಿದ ಮೇಲೆ ಕರುಳು ಕರಗಿತು. ಕಣ್ಣೀರನ್ನು ತಡೆಯಲಾಗದೆ ಒಳ ಅರಮನೆಗೆ ತ್ವರೆಯಾಗಿ ಹೋಗಿ ಅಲ್ಲಿ ಅತ್ತನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೋಸೇಫನ ಕರುಳು ತನ್ನ ತಮ್ಮನ ಬಗ್ಗೆ ಮರುಗಿದ್ದರಿಂದ ಅವನು ಅವಸರದಲ್ಲಿ ಎದ್ದು ಅಳುವುದಕ್ಕೆ ಸ್ಥಳವನ್ನು ಹುಡುಕಿ, ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.