Genesis 43:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಸೇಫನೊಬ್ಬನೇ ಒಂದು ಮೇಜಿನಲ್ಲಿ ಊಟ ಮಾಡಿದನು. ಅವನ ಸಹೋದರರು ಒಟ್ಟಾಗಿ ಮತ್ತೊಂದು ಮೇಜಿನಲ್ಲಿ ಊಟ ಮಾಡಿದರು. ಈಜಿಪ್ಟಿನವರು ಬೇರೊಂದು ಮೇಜಿನಲ್ಲಿ ಊಟ ಮಾಡಿದರು. ಇಬ್ರಿಯ ಜನರೊಂದಿಗೆ ಊಟ ಮಾಡುವುದು ತಪ್ಪೆಂಬುದು ಅವರ ನಂಬಿಕೆಯಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪರಿಚಾರಕರು ಅವನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡವಿದ್ದ ಐಗುಪ್ತರಿಗೂ ಬೇರೆ ಬೇರೆಯಾಗಿ ಊಟಕ್ಕೆ ಬಡಿಸಿದರು. ಏಕೆಂದರೆ ಐಗುಪ್ತರು ಇಬ್ರಿಯರ ಜೊತೆ ಸಹಪಂಕ್ತಿಯಲ್ಲಿ ಊಟಮಾಡುತ್ತಿರಲಿಲ್ಲ. ಅದು ಐಗುಪ್ತರಿಗೆ ಅಸಹ್ಯವಾಗಿತ್ತು.
Kannada BSI Bible 2016
ಆಗ ಅವರು ಯೋಸೇಫನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡ ಇದ್ದ ಐಗುಪ್ತ್ಯರಿಗೂ ಬೇರೆಬೇರೆಯಾಗಿ ಊಟಕ್ಕೆ ಬಡಿಸಿ ದರು. ಐಗುಪ್ತ್ಯರು ಇಬ್ರಿಯರ ಕೂಡ ಊಟ ಮಾಡುತ್ತಿರಲಿಲ್ಲ. ಅದು ಐಗುಪ್ತ್ಯರಿಗೆ ಅಸಹ್ಯವಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪರಿಚಾರಕರು ಅವನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡವಿದ್ದ ಐಗುಪ್ತ್ಯರಿಗೂ ಬೇರೆಬೇರೆಯಾಗಿ ಊಟಕ್ಕೆ ಬಡಿಸಿದರು. ಐಗುಪ್ತ್ಯರು ಇಬ್ರಿಯರ ಸಹಪಂಕ್ತಿಯಲ್ಲಿ ಊಟಮಾಡುವದಿಲ್ಲ; ಅದು ಅವರಿಗೆ ಅಸಹ್ಯ.
Kannada Bible (KNCL) BSI 2016
ಪರಿಚಾರಕರು ಅವನಿಗೆ ಬೇರೆ, ಅವನ ಅಣ್ಣತಮ್ಮಂದಿರಿಗೇ ಬೇರೆ, ಅವನ ಸಂಗಡವಿದ್ದ ಈಜಿಪ್ಟಿನವರಿಗೇ ಬೇರೆ, ಹೀಗೆ ಬೇರೆಬೇರೆಯಾಗಿ ಊಟಕ್ಕೆ ಬಡಿಸಿದರು. ಈಜಿಪ್ಟಿನವರು ಹಿಬ್ರಿಯರ ಸಹಪಂಕ್ತಿಯಲ್ಲಿ ಊಟಮಾಡುವುದಿಲ್ಲ; ಅದು ಅವರಿಗೆ ಅಸಹ್ಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು ಯೋಸೇಫನಿಗೆ, ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡ ಇದ್ದ ಈಜಿಪ್ಟಿನವರಿಗೂ ಬೇರೆಬೇರೆಯಾಗಿ ಊಟಕ್ಕೆ ಇಟ್ಟರು. ಏಕೆಂದರೆ ಈಜಿಪ್ಟಿನವರು ಹಿಬ್ರಿಯರ ಕೂಡ ಊಟಮಾಡುತ್ತಿರಲಿಲ್ಲ. ಅದು ಈಜಿಪ್ಟಿನವರಿಗೆ ಅಸಹ್ಯವಾಗಿತ್ತು.