Genesis 43:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಸೇಫನ ಎದುರಿನ ಸಾಲಿನಲ್ಲಿ ಕುಳಿತುಕೊಳ್ಳಲು ಯೋಸೇಫನ ಸಹೋದರರಿಗೆ ಹಿರಿಯವನಿಂದ ಮೊದಲುಗೊಂಡು ಕಿರಿಯವನವರೆಗೆ ಕ್ರಮವಾಗಿ ಸ್ಥಳವನ್ನು ಗೊತ್ತುಪಡಿಸಲಾಗಿತ್ತು. ಆದ್ದರಿಂದ ಸಹೋದರರೆಲ್ಲಾ ಅತ್ಯಾಶ್ಚರ್ಯದಿಂದ ಒಬ್ಬರನ್ನೊಬ್ಬರು ನೋಡತೊಡಗಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಸೇಫನು ತನ್ನ ಅಣ್ಣತಮ್ಮಂದಿರನ್ನು ಹಿರಿಯವನು ಮೊದಲುಗೊಂಡು ಕಿರಿಯವನವರೆಗೂ ಅವರವರ ವಯಸ್ಸಿನ ಪ್ರಕಾರವೇ ಕುಳಿತುಕೊಳ್ಳುವಂತೆ ಮಾಡಿದ್ದರಿಂದ, ಅವರು ತಮ್ಮೊಳಗೆ ಆಶ್ಚರ್ಯಪಟ್ಟರು.
Kannada BSI Bible 2016
ಅವರು ಚೊಚ್ಚಲನಾದವನು ತನ್ನ ಚೊಚ್ಚಲತನದ ಪ್ರಕಾರವೂ ಕಿರಿಯನು ತನ್ನ ಕಿರಿತನದ ಪ್ರಕಾರವೂ ಅವನ ಮುಂದೆ ಕೂತಿರುವಾಗ ಆ ಮನುಷ್ಯರು ತಮ್ಮ ತಮ್ಮೊಳಗೆ ಆಶ್ಚರ್ಯಪಟ್ಟರು.ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರವನ್ನು ಕಳುಹಿಸಿದಾಗ ಬೆನ್ಯಾವಿಾನನಿಗೆ ಕಳುಹಿಸಿದ ಆಹಾರವು ಅವರೆಲ್ಲರ ಆಹಾರಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಅವನ ಸಂಗಡ ಪಾನಮಾಡಿ ಸಂತೋಷದಿಂದ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಸೇಫನು ತನ್ನ ಅಣ್ಣತಮ್ಮಂದಿರನ್ನು ಹಿರಿಯವನು ಮೊದಲುಗೊಂಡು ಕಿರಿಯವನವರೆಗೂ ಅವರವರ ವಯಸ್ಸಿನ ಪ್ರಕಾರವೇ ಕುಳ್ಳಿರಿಸಿದ್ದರಿಂದ ಅವರು ಒಬ್ಬರನ್ನೊಬ್ಬರು ನೋಡುತ್ತಾ ಆಶ್ಚರ್ಯಪಟ್ಟರು.
Kannada Bible (KNCL) BSI 2016
ಜೋಸೆಫನು ತನ್ನ ಅಣ್ಣತಮ್ಮಂದಿರನ್ನು, ಹಿರಿಯವನು ಮೊದಲ್ಗೊಂಡು ಕಿರಿಯವನವರೆಗೂ, ಅವರವರ ಮಯಸ್ಸಿನ ಪ್ರಕಾರ ಕುಳ್ಳಿರಿಸಿದ್ದನು. ಇದನ್ನು ಗಮನಿಸಿದ ಅವರು ಒಬ್ಬರನ್ನೊಬ್ಬರು ನೋಡುತ್ತಾ ಆಶ್ಚರ್ಯಪಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಸೇಫನು ಅವರನ್ನು ಹಿರಿಯವರಿಂದ ಕಿರಿಯವನವರೆಗೆ ಅವರವರ ವಯಸ್ಸಿನ ಪ್ರಕಾರ ಕುಳಿತುಕೊಳ್ಳುವಂತೆ ಮಾಡಿದ್ದರಿಂದ, ಅವರು ತಮ್ಮತಮ್ಮೊಳಗೆ ಆಶ್ಚರ್ಯಪಟ್ಟರು.