Genesis 43:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೇವಕರು ಯೋಸೇಫನ ಮೇಜಿನಿಂದ ಊಟವನ್ನು ತೆಗೆದುಕೊಂಡು ಅವರಿಗೆ ಬಡಿಸುತ್ತಿದ್ದರು. ಆದರೆ ಸೇವಕರು ಬೆನ್ಯಾಮೀನನಿಗೆ ಬೇರೆಯವರಿಗಿಂತ ಐದರಷ್ಟು ಹೆಚ್ಚಾಗಿ ಕೊಟ್ಟರು. ಸಹೋದರರು ಯಥೇಚ್ಛವಾಗಿ ಊಟ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರಗಳಲ್ಲಿ ಭಾಗಗಳನ್ನು ಕಳುಹಿಸಿದಾಗ, ಬೆನ್ಯಾಮೀನನಿಗೆ ಬಂದ ಭಾಗವು ಮಿಕ್ಕಾದವರ ಭಾಗಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಪಾನಮಾಡಿ ಅವನ ಸಂಗಡ ಸಂತೋಷದಿಂದ ಇದ್ದರು.
Kannada BSI Bible 2016
ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರವನ್ನು ಕಳುಹಿಸಿದಾಗ ಬೆನ್ಯಾವಿಾನನಿಗೆ ಕಳುಹಿಸಿದ ಆಹಾರವು ಅವರೆಲ್ಲರ ಆಹಾರಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಅವನ ಸಂಗಡ ಪಾನಮಾಡಿ ಸಂತೋಷದಿಂದ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಸೇಫನು ತನ್ನ ಮುಂದೆ ಬಡಿಸಿದ್ದ ಪದಾರ್ಥಗಳಲ್ಲಿ ಅವರಿಗೆ ಭಾಗಗಳನ್ನು ಕಳುಹಿಸಿದನು; ಆದರೆ ಬೆನ್ಯಾಮೀನನಿಗೆ ಬಂದ ಭಾಗವು ವಿುಕ್ಕಾದವರ ಭಾಗಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಯಥೇಚ್ಫವಾಗಿ ಪಾನಮಾಡಿ ಅವನ ಸಂಗಡ ಸಂಭ್ರಮದಿಂದಿದ್ದರು.
Kannada Bible (KNCL) BSI 2016
ಜೋಸೆಫನು ತನ್ನ ಮುಂದೆ ಬಡಿಸಿದ್ದ ಪದಾರ್ಥಗಳಲ್ಲಿ ಅವರಿಗೆ ಭಾಗಗಳನ್ನು ಕಳಿಸಿದನು. ಬೆನ್ಯಾಮೀನನಿಗೆ ಬಂದ ಭಾಗವಾದರೋ ಮಿಕ್ಕವರ ಭಾಗಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಯಥೇಚ್ಛವಾಗಿ ಪಾನಮಾಡಿ ಜೋಸೆಫನ ಸಂಗಡ ಸಂಭ್ರಮದಿಂದಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರವನ್ನು ಕಳುಹಿಸಿದಾಗ, ಬೆನ್ಯಾಮೀನನಿಗೆ ಕಳುಹಿಸಿದ ಆಹಾರವು ಅವರೆಲ್ಲರ ಆಹಾರಗಳಿಗಿಂತ ಐದರಷ್ಟು ಹೆಚ್ಚಾಗಿತ್ತು ಮತ್ತು ಅವರು ಅವನ ಸಂಗಡ ಕುಡಿದು ಸಂತೋಷದಿಂದಿದ್ದರು.