Genesis 43:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಬೆನ್ಯಾಮೀನನನ್ನು ಕಳುಹಿಸದಿದ್ದರೆ, ನಾವು ಹೋಗುವುದಿಲ್ಲ; ಆ ಮನುಷ್ಯನು ನಮಗೆ ಬೆನ್ಯಾಮೀನನಿಲ್ಲದೆ ಬರಕೂಡದೆಂದು ಎಚ್ಚರಿಕೆ ಕೊಟ್ಟಿದ್ದಾನೆ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನನ್ನು ನೀನು ಕಳುಹಿಸದೆ ಹೋದರೆ ನಾವು ಹೋಗುವುದಿಲ್ಲ. ಏಕೆಂದರೆ ಆ “ಮನುಷ್ಯನು ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲದಿದ್ದರೆ ನನ್ನ ಮುಖವನ್ನು ನೋಡಬಾರದು” ಎಂದು ಹೇಳಿದ್ದಾನೆ.
Kannada BSI Bible 2016
ಅವನನ್ನು ಕಳುಹಿಸದೆ ಹೋದರೆ ನಾವು ಹೋಗುವದಿಲ್ಲ; ಯಾಕಂದರೆ ಆ ಮನುಷ್ಯನು--ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲದಿದ್ದರೆ ನನ್ನ ಮುಖವನ್ನು ನೋಡಬಾರದು ಎಂದು ನಮಗೆ ಹೇಳಿದ್ದಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನನ್ನು ಕಳುಹಿಸಿಕೊಡದಿದ್ದರೆ ನಾವು ಹೋಗುವದಿಲ್ಲ. ಆ ಮನುಷ್ಯನು ನಮಗೆ - ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲದಿದ್ದರೆ ನನ್ನ ಮುಖವನ್ನು ನೋಡಲೇಕೂಡದೆಂದು ಹೇಳಿದ್ದಾನೆ ಅಂದನು.
Kannada Bible (KNCL) BSI 2016
ಕಳಿಸಿಕೊಡದಿದ್ದರೆ, ನಾವು ಹೋಗುವುದಿಲ್ಲ. ಆ ಮನುಷ್ಯ, ‘ನಿಮ್ಮ ತಮ್ಮ ನಿಮ್ಮ ಸಂಗಡ ಇಲ್ಲದಿದ್ದರೆ ಸಮ್ಮುಖಕ್ಕೆ ಬರಲೇ ಕೂಡದು’ ಎಂದಿದ್ದಾನೆ\.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನನ್ನು ಕಳುಹಿಸದೆ ಹೋದರೆ, ನಾವು ಹೋಗುವುದಿಲ್ಲ. ಏಕೆಂದರೆ ಆ ಮನುಷ್ಯನು, ‘ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲದಿದ್ದರೆ, ನನ್ನ ಮುಖವನ್ನು ನೋಡಬಾರದು,’ ಎಂದು ನಮಗೆ ಹೇಳಿದ್ದಾನೆ,” ಎಂದನು.