Genesis 43:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ಸುರಕ್ಷಿತವಾಗಿರುವಂತೆ ನಾನು ನೋಡಿಕೊಳ್ಳುವೆನು. ನಾನು ಅವನಿಗೆ ಜವಾಬ್ದಾರನಾಗಿರುತ್ತೇನೆ. ನಾನು ಅವನನ್ನು ನಿನ್ನ ಬಳಿಗೆ ಮತ್ತೆ ಕರೆದುಕೊಂಡು ಬರದಿದ್ದರೆ, ನೀನು ಸದಾಕಾಲ ನನ್ನನ್ನು ದೂಷಿಸಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ಅವನ ವಿಷಯ ನನ್ನನ್ನೇ ಕೇಳಬಹುದು. ನಾನು ಅವನನ್ನು ತಿರುಗಿ ಕರೆದುಕೊಂಡು ಬಂದು ನಿನ್ನೆದುರಿನಲ್ಲಿ ನಿಲ್ಲಿಸದೆ ಹೋದರೆ ಆ ಅಪರಾಧ ಎಂದೆಂದಿಗೂ ನನ್ನ ಮೇಲೆ ಇರಲಿ.
Kannada BSI Bible 2016
ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ನೀನು ಅವನ ವಿಷಯದಲ್ಲಿ ನನ್ನನ್ನೇ ಕೇಳಬಹುದು. ನಾನು ಅವನನ್ನು ನಿನ್ನ ಬಳಿಗೆ ತಂದು ನಿನ್ನೆದುರಿಗೆ ನಿಲ್ಲಿಸದಿದ್ದರೆ ಎಂದೆಂದಿಗೂ ನಾನು ಆ ಅಪರಾಧವನ್ನು ಹೊರುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನೇ ಅವನಿಗೆ ಹೊಣೆ; ಅವನ ವಿಷಯ ನನ್ನನ್ನೇ ಕೇಳಬಹುದು. ನಾನು ಅವನನ್ನು ತಿರಿಗಿ ಕರಕೊಂಡು ಬಂದು ನಿನ್ನೆದುರಿನಲ್ಲಿ ನಿಲ್ಲಿಸದೆ ಹೋದರೆ ಆ ದೋಷ ಎಂದೆಂದಿಗೂ ನನ್ನ ಮೇಲೆ ಇರಲಿ.
Kannada Bible (KNCL) BSI 2016
ಅವನಿಗೆ ನಾನೇ ಹೊಣೆ; ಅವನ ವಿಷಯ ನನಗೆ ಬಿಡಿ. ನಾನು ಅವನನ್ನು ಮತ್ತೆ ಕರೆದುಕೊಂಡು ಬಂದು ನಿಮ್ಮ ಎದುರಿನಲ್ಲಿ ನಿಲ್ಲಿಸದೆಹೋದರೆ ಆ ದೋಷ ಸದಾಕಾಲ ನನ್ನ ಮೇಲೆ ಇರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ನೀನು ಅವನ ವಿಷಯದಲ್ಲಿ ನನ್ನನ್ನೇ ಕೇಳಬಹುದು. ನಾನು ಅವನನ್ನು ನಿನ್ನ ಬಳಿಗೆ ತಂದು ನಿನ್ನೆದುರಿಗೆ ನಿಲ್ಲಿಸದಿದ್ದರೆ, ಎಂದೆಂದಿಗೂ ನಾನು ಅಪರಾಧವನ್ನು ಹೊರುವೆನು.