Genesis 44:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಯೋಸೇಫನು ತನ್ನ ಸೇವಕನಿಗೆ ಆಜ್ಞೆಮಾಡಿದನು. ಯೋಸೇಫನು, “ಈ ಜನರು ತೆಗೆದುಕೊಂಡು ಹೋಗಬಹುದಾದಷ್ಟು ದವಸಧಾನ್ಯಗಳನ್ನು ಇವರ ಚೀಲಗಳಲ್ಲಿ ತುಂಬಿ ಪ್ರತಿಯೊಬ್ಬನ ಹಣವನ್ನೂ ಧಾನ್ಯದೊಂದಿಗೆ ಚೀಲದಲ್ಲಿಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಸೇಫನು ತರುವಾಯ ತನ್ನ ಗೃಹನಿರ್ವಾಹಕನಿಗೆ, “ಆ ಮನುಷ್ಯರು ಚೀಲಗಳನ್ನು ಹೊರುವಷ್ಟು ಧಾನ್ಯವನ್ನು ತುಂಬಿಸಿ, ಒಬ್ಬೊಬ್ಬನ ಚೀಲದ ಬಾಯಲ್ಲಿ ಅವನವನ ಹಣದ ಗಂಟನ್ನು ಇಡಿರಿ.
Kannada BSI Bible 2016
ಯೋಸೇಫನು ತನ್ನ ಮನೆಯ ಉಗ್ರಾಣಿಕನಿಗೆ--ಈ ಮನುಷ್ಯರ ಚೀಲಗಳಲ್ಲಿ ಹೊರು ವದಕ್ಕಾಗುವಷ್ಟು ಧಾನ್ಯವನ್ನು ತುಂಬಿಸಿ ಪ್ರತಿಯೊಬ್ಬನ ಹಣವನ್ನು ಅವನವನ ಚೀಲದಲ್ಲಿ ಇಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಯೋಸೇಫನು ತನ್ನ ಮನೆವಾರ್ತೆಯವನಿಗೆ - ಆ ಮನುಷ್ಯರ ಚೀಲಗಳಲ್ಲಿ ಹೊರುವಷ್ಟು ಧಾನ್ಯವನ್ನು ತುಂಬಿಸಿ ಒಬ್ಬೊಬ್ಬನ ಚೀಲದ ಬಾಯಲ್ಲಿ
Kannada Bible (KNCL) BSI 2016
ತರುವಾಯ ಜೋಸೆಫನು ತನ್ನ ಗೃಹನಿರ್ವಾಹಕನನ್ನು ಕರೆದು, “ಆ ಜನರ ಗೋಣಿಚೀಲಗಳಲ್ಲಿ ಹೊರುವಷ್ಟು ಧಾನ್ಯವನ್ನು ತುಂಬಿಸಿ, ಒಬ್ಬೊಬ್ಬನ ಚೀಲದ ಬಾಯಿಯಲ್ಲಿ ಅವನವನ ಹಣದ ಗಂಟನ್ನಿಡು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಸೇಫನು ತನ್ನ ಮನೆಯ ಉಗ್ರಾಣಿಕನಿಗೆ, “ಈ ಮನುಷ್ಯರ ಚೀಲಗಳಲ್ಲಿ ಹೊರುವುದಕ್ಕಾಗುವಷ್ಟು ಧಾನ್ಯವನ್ನು ತುಂಬಿಸಿ, ಪ್ರತಿಯೊಬ್ಬನ ಹಣವನ್ನು ಅವನವನ ಚೀಲದ ಬಾಯಲ್ಲಿ ಇಡು.