Genesis 44:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದನು, “ಸ್ವಾಮಿ, ನಾವು ಹೇಳುವಂಥದ್ದು ಏನೂ ಇಲ್ಲ; ವಿವರಿಸಲು ಯಾವ ದಾರಿಯೂ ಇಲ್ಲ; ನಾವು ತಪ್ಪಿತಸ್ಥರಲ್ಲವೆಂದು ತೋರಿಸಲು ಯಾವ ಮಾರ್ಗವೂ ಇಲ್ಲ. ನಾವು ಮಾಡಿದ ಬೇರೊಂದು ಕಾರ್ಯದ ನಿಮಿತ್ತ ದೇವರು ನಮ್ಮನ್ನು ತಪ್ಪಿತಸ್ಥರೆಂದು ನಿರ್ಣಯಿಸಿದ್ದಾನೆ. ಆದ್ದರಿಂದ ನಾವೆಲ್ಲರೂ ಬೆನ್ಯಾಮೀನನೂ ನಿನಗೆ ಗುಲಾಮರಾಗಿರುವೆವು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದನು, “ನಾವು ನಮ್ಮ ಸ್ವಾಮಿಗೆ ಏನು ಹೇಳೋಣ? ನಾವು ಏನು ಮಾತನಾಡೋಣ? ನಾವು ನೀತಿವಂತರಾಗಿ ತೋರುವಂತೆ ಏನು ಮಾಡೋಣ? ನಿನ್ನ ಸೇವಕರ ಪಾಪಕೃತ್ಯವನ್ನು ದೇವರು ಹೊರಪಡಿಸಿದ್ದಾನೆ. ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವಲ್ಲದೆ ನಾವೆಲ್ಲರೂ ನಮ್ಮ ಸ್ವಾಮಿಗೆ ಗುಲಾಮರಾದೆವು” ಎಂದನು.
Kannada BSI Bible 2016
ಯೆಹೂದನು--ನಾವು ನಮ್ಮ ಒಡೆಯ ನಿಗೆ ಏನು ಹೇಳೋಣ? ಏನು ಮಾತನಾಡೋಣ? ಹೇಗೆ ನಮ್ಮನ್ನು ನಾವು ನಿರ್ದೋಷಿಗಳೆಂದು ತೋರಿಸಿ ಕೊಳ್ಳೋಣ? ನಿನ್ನ ದಾಸರ ಪಾಪವನ್ನು ದೇವರು ಕಂಡುಕೊಂಡಿದ್ದಾನೆ. ಇಗೋ, ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನೂ ನಾವೂ ನಮ್ಮ ಒಡೆಯ ನಿಗೆ ದಾಸರಾಗಿದ್ದೇವೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮಗೆ ತಿಳಿಯಲಿಲ್ಲವೋ ಎಂದು ಕೇಳಲು ಯೆಹೂದನು - ನಾವು ನಮ್ಮ ಸ್ವಾವಿುಗೆ ಏನು ಹೇಳೋಣ? ನಾವು ಹೇಗೆ ಮಾತಾಡೇವು? ನಾವು ನಿರ್ದೋಷಿಗಳಾಗಿ ತೋರುವಂತೆ ಏನು ಮಾಡಬೇಕು? ನಿನ್ನ ಸೇವಕರ ಪಾಪಕೃತ್ಯವನ್ನು ದೇವರು ಹೊರಪಡಿಸಿದ್ದಾನೆ. ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವಲ್ಲದೆ ನಾವೆಲ್ಲರೂ ನಮ್ಮ ಸ್ವಾವಿುಗೆ ಗುಲಾಮರಾದೆವಲ್ಲವೇ ಅನ್ನಲು ಯೋಸೇಫನು -
Kannada Bible (KNCL) BSI 2016
ಅದಕ್ಕೆ ಯೆಹೂದನು, “ನಮ್ಮೊಡೆಯರಿಗೆ ನಾವು ಏನು ಹೇಳೋಣ? ಯಾವ ಉತ್ತರ ಕೊಡೋಣ? ನಾವು ನಿರ್ದೋಷಿಗಳೆಂದು ತೋರಿಸಲು, ಏನುತಾನೆ ಮಾಡುವುದು? ನಿಮ್ಮ ಸೇವಕರಾದ ನಮ್ಮ ಪಾಪಕೃತ್ಯವನ್ನು ದೇವರೇ ಹೊರಪಡಿಸಿದ್ದಾರೆ. ಆ ಪಾತ್ರೆ ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವಲ್ಲ, ನಾವೆಲ್ಲರೂ ನಮ್ಮೊಡೆಯರಿಗೆ ಗುಲಾಮರಾದೆವಲ್ಲವೆ?\ ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದನು, “ನಾವು ನಮ್ಮ ಒಡೆಯನಿಗೆ ಏನು ಹೇಳೋಣ? ಏನು ಮಾತನಾಡೋಣ? ಹೇಗೆ ನಮ್ಮನ್ನು ನಾವು ನೀತಿವಂತರಾಗಿ ಮಾಡಿಕೊಳ್ಳೋಣ? ನಿನ್ನ ದಾಸರ ಪಾಪವನ್ನು ದೇವರು ಹೊರಪಡಿಸಿದ್ದಾರೆ. ನಾವೂ ಪಾತ್ರೆಯು ಯಾರ ಕೈಯಲ್ಲಿ ಸಿಕ್ಕಿತೋ ಅವನೂ ನನ್ನ ಒಡೆಯನಿಗೆ ದಾಸರಾಗಿದ್ದೇವೆ,” ಎಂದನು.