Genesis 44:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಯೋಸೇಫನು, “ನಾನು ನಿಮ್ಮೆಲ್ಲರನ್ನು ಗುಲಾಮರನ್ನಾಗಿ ಮಾಡುವುದಿಲ್ಲ; ಬಟ್ಟಲನ್ನು ಕದ್ದುಕೊಂಡವನು ಮಾತ್ರ ನನ್ನ ಗುಲಾಮನಾಗಿರಬೇಕು; ಉಳಿದ ನೀವೆಲ್ಲರೂ ನಿಮ್ಮ ತಂದೆಯ ಬಳಿಗೆ ಸಮಾಧಾನದಿಂದ ಹೋಗಬಹುದು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಸೇಫನು, “ಹಾಗೆ ಎಂದಿಗೂ ಆಗಬಾರದು. ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವೇ ನನಗೆ ಗುಲಾಮನಾಗಿರಲಿ. ನೀವಾದರೋ ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ” ಎಂದನು.
Kannada BSI Bible 2016
ಆಗ ಯೋಸೇ ಫನು--ಹಾಗೆ ಮಾಡುವದು ನನಗೆ ದೂರವಾಗಿರಿಲಿ. ಯಾರ ಬಳಿಯಲ್ಲಿ ಆ ಪಾತ್ರೆಯು ಸಿಕ್ಕಿತೋ ಅವನೇ ನನಗೆ ದಾಸನಾಗಿರಲಿ. ಆದರೆ ನೀವು ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗೆ ಎಂದಿಗೂ ಆಗಬಾರದು; ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವೇ ನನಗೆ ಗುಲಾಮನಾಗಬೇಕು; ನೀವಾದರೋ ಅಡ್ಡಿಯಿಲ್ಲದೆ ನಿಮ್ಮ ತಂದೆಯ ಬಳಿಗೆ ಹೋಗಬಹುದು ಅಂದನು.
Kannada Bible (KNCL) BSI 2016
ಜೋಸೆಫನು, “ಹಾಗೆ ಎಂದಿಗೂ ಆಗಬಾರದು; ಆ ಪಾತ್ರೆ ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರ ನನಗೆ ಗುಲಾಮನಾಗಬೇಕು; ನೀವಾದರೋ ಅಡ್ಡಿಯಿಲ್ಲದೆ ನಿಮ್ಮ ತಂದೆಯ ಬಳಿಗೆ ಹೋಗಬಹುದು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೋಸೇಫನು, “ಹಾಗೆ ಎಂದಿಗೂ ಆಗಬಾರದು. ಯಾರ ಬಳಿಯಲ್ಲಿ ಆ ಪಾತ್ರೆಯು ಸಿಕ್ಕಿತೋ, ಅವನು ನನಗೆ ದಾಸನಾಗಿರಲಿ. ಆದರೆ ನೀವು ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ,” ಎಂದನು.