Genesis 44:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೆಹೂದನು ಯೋಸೇಫನ ಬಳಿಗೆ ಹೋಗಿ, “ಸ್ವಾಮಿ, ತಮ್ಮೊಂದಿಗೆ ಬಿಚ್ಚುಮನಸ್ಸಿನಿಂದ ಮಾತನಾಡಲು ದಯವಿಟ್ಟು ಅನುಮತಿಯಾಗಲಿ; ದಯವಿಟ್ಟು ನನ್ನ ಮೇಲೆ ಕೋಪಗೊಳ್ಳಬೇಡಿ. ನೀವು ಸ್ವತಃ ಫರೋಹನಂತೆ ಇರುವಿರೆಂದು ನನಗೆ ತಿಳಿದಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದನು ಹತ್ತಿರಕ್ಕೆ ಬಂದು, “ನನ್ನ ಒಡೆಯನೇ, ನಿನ್ನ ಸೇವಕನಾದ ನಾನು ಒಂದು ಮಾತನ್ನು ನನ್ನ ಒಡೆಯನಿಗೆ ಬಿಡಿಸಿ ಹೇಳುವುದಕ್ಕೆ ಅಪ್ಪಣೆಯಾಗಬೇಕು. ನಿನ್ನ ದಾಸನ ಮೇಲೆ ಕೋಪಗೊಳ್ಳಬಾರದು. ಏಕೆಂದರೆ ನೀನು ಫರೋಹನಿಗೆ ಸಮಾನನು ಎಂದು ನಾನು ಬಲ್ಲೇ.
Kannada BSI Bible 2016
ಯೆಹೂದನು ಅವನ ಸವಿಾಪಕ್ಕೆ ಬಂದು--ಓ ನನ್ನ ಒಡೆಯನೇ, ನನ್ನ ಒಡೆಯನ ಕಿವಿಗಳಲ್ಲಿ ಒಂದು ಮಾತು ಹೇಳುವದಕ್ಕೆ ನಿನ್ನ ದಾಸನಿಗೆ ಅಪ್ಪಣೆ ಯಾಗಬೇಕು. ನಿನ್ನ ದಾಸನ ಮೇಲೆ ನಿನ್ನ ಕೋಪವು ಉರಿಯದೆ ಇರಲಿ. ಯಾಕಂದರೆ ನೀನು ಫರೋ ಹನಿಗೆ ಸಮಾನನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೂದನು ಹತ್ತರಕ್ಕೆ ಬಂದು - ನಿನ್ನ ಸೇವಕನಾದ ನಾನು ಒಂದು ಮಾತನ್ನು ಅರಿಕೆಮಾಡಿಕೊಳ್ಳುತ್ತೇನೆ, ನನ್ನ ಮೇಲೆ ಸಿಟ್ಟು ಮಾಡಬಾರದು; ನೀನು ಫರೋಹನಿಗೆ ಸಮಾನನಾಗಿದ್ದೀಯೆಂದು ನಾನು ಬಲ್ಲೆ.
Kannada Bible (KNCL) BSI 2016
ಆಗ ಯೆಹೂದನು ಹತ್ತಿರಕ್ಕೆ ಬಂದು, “ನನ್ನೊಡೆಯಾ, ತಮ್ಮ ಸೇವಕನಾದ ನಾನು ಒಂದು ಮಾತನ್ನು ಅರಿಕೆಮಾಡಿಕೊಳ್ಳುತ್ತೇನೆ; ನನ್ನ ಮೇಲೆ ಸಿಟ್ಟುಮಾಡಬೇಡಿ; ತಾವು ಫರೋಹನಿಗೆ ಸಮಾನರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದನು ಅವನ ಸಮೀಪಕ್ಕೆ ಬಂದು, “ನನ್ನ ಒಡೆಯನೇ, ನನ್ನ ಒಡೆಯನ ಕಿವಿಗಳಲ್ಲಿ ಒಂದು ಮಾತು ಹೇಳುವುದಕ್ಕೆ ನಿನ್ನ ದಾಸನಿಗೆ ಅಪ್ಪಣೆಯಾಗಬೇಕು. ನಿನ್ನ ದಾಸನ ಮೇಲೆ ನಿನ್ನ ಕೋಪವು ಉರಿಯದೆ ಇರಲಿ. ಏಕೆಂದರೆ ನೀನು ಫರೋಹನಿಗೆ ಸಮಾನನು.