Genesis 44:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಿರಿಯ ಸಹೋದರನ ಚೀಲದಲ್ಲಿಯೂ ಹಣವನ್ನು ಇಡು. ಅಲ್ಲದೆ ನನ್ನ ವಿಶೇಷವಾದ ಬೆಳ್ಳಿ ಬಟ್ಟಲನ್ನು ಸಹ ಅವನ ಚೀಲದಲ್ಲಿಡು” ಎಂದು ಆಜ್ಞಾಪಿಸಿದನು. ಅಂತೆಯೇ ಸೇವಕನು ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಿರಿಯವನ ಚೀಲದಲ್ಲಿ ಅವನು ದವಸಕ್ಕೆ ತಂದ ಹಣವನ್ನಲ್ಲದೇ, ತನ್ನ ಬೆಳ್ಳಿಯ ಪಾನ ಪಾತ್ರೆಯನ್ನು ಇಡಬೇಕು” ಎಂದು ಅಪ್ಪಣೆಕೊಡಲು, ಗೃಹನಿರ್ವಾಹಕನು ಹಾಗೆಯೇ ಮಾಡಿದನು.
Kannada BSI Bible 2016
ನನ್ನ ಪಾತ್ರೆ ಯಾದ ಬೆಳ್ಳಿಯ ಪಾತ್ರೆಯನ್ನು ಕಿರಿಯವನ ಚೀಲದ ಬಾಯಲ್ಲಿ ಅವನ ಧಾನ್ಯದ ಹಣದ ಸಂಗಡ ಇಡು ಎಂದು ಆಜ್ಞಾಪಿಸಿದನು. ಯೋಸೇಫನು ಹೇಳಿ ದಂತೆಯೇ ಅವನು ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನವನ ಹಣದ ಗಂಟನ್ನಿಟ್ಟು ಕಿರಿಯವನ ಚೀಲದ ಬಾಯೊಳಗೆ ಅವನು ದವಸಕ್ಕೆ ತಂದ ಹಣವನ್ನಲ್ಲದೆ ನನ್ನ ಬೆಳ್ಳಿಯ ಪಾನಪಾತ್ರೆಯನ್ನೂ ಇಡಬೇಕೆಂದು ಅಪ್ಪಣೆಕೊಡಲು ಮನೆವಾರ್ತೆಯವನು ಹಾಗೆಯೇ ಮಾಡಿದನು.
Kannada Bible (KNCL) BSI 2016
ಕಿರಿಯವನ ಚೀಲದ ಬಾಯೊಳಗೆ ಅವನು ದವಸಕ್ಕೆ ತಂದ ಹಣವನ್ನಲ್ಲದೆ ನನ್ನ ಬೆಳ್ಳಿಯ ಪಾನಪಾತ್ರೆಯನ್ನೂ ಇಡು,” ಎಂದು ಅಪ್ಪಣೆಕೊಟ್ಟನು. ಗೃಹನಿರ್ವಾಹಕನು ಅದರಂತೆಯೇ ಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಬೆಳ್ಳಿಯ ಪಾತ್ರೆಯನ್ನು ಚಿಕ್ಕವನ ಚೀಲದ ಬಾಯಲ್ಲಿ ಅವನ ಧಾನ್ಯ ಹಾಗೂ ಹಣದ ಸಂಗಡ ಇಡು,” ಎಂದು ಆಜ್ಞಾಪಿಸಿದನು. ಯೋಸೇಫನು ಹೇಳಿದಂತೆಯೇ ಅವನು ಮಾಡಿದನು.