Genesis 44:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವು ನಿಮಗೆ ‘ಆ ಯುವಕನು ಬರಲಾರನು. ಅವನು ತನ್ನ ತಂದೆಯನ್ನು ಬಿಟ್ಟುಬರಲಾಗದು. ಅವನ ತಂದೆ ಅವನನ್ನು ಕಳೆದುಕೊಂಡರೆ ತುಂಬ ದುಃಖದಿಂದ ಸತ್ತುಹೋಗುವನು’ ಎಂದು ಹೇಳಿದೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಸ್ವಾಮಿಯವರಿಗೆ, ‘ಆ ಹುಡುಗನು ತನ್ನ ತಂದೆಯನ್ನು ಬಿಟ್ಟು ಬರುವುದಿಲ್ಲ. ಅವನು ತಂದೆಯನ್ನು ಅಗಲಿದರೆ ತಂದೆಯು ಸಾಯುವನು’ ಎಂದು ಹೇಳಿದೆವು.
Kannada BSI Bible 2016
ನಾವು ನಮ್ಮ ಒಡೆಯನಿಗೆಆ ಹುಡುಗನು ತನ್ನ ತಂದೆಯನ್ನು ಅಗಲಕೂಡದು. ಅವನು ತಂದೆಯನ್ನು ಬಿಟ್ಟಗಲಿದರೆ ತಂದೆಯು ಸಾಯುವನು ಎಂದು ಹೇಳಿದೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಸ್ವಾವಿುಯವರಿಗೆ - ಆ ಹುಡುಗನು ತನ್ನ ತಂದೆಯನ್ನು ಅಗಲುವದಕ್ಕಾಗುವದಿಲ್ಲ; ಅಗಲಿದರೆ ತಂದೆ ಸತ್ತಾನು ಅಂದೆವು.
Kannada Bible (KNCL) BSI 2016
ನಾವು, ‘ಆ ಹುಡುಗನು ತಂದೆಯನ್ನು ಬಿಟ್ಟು ಅಗಲುವುದಕ್ಕಾಗುವುದಿಲ್ಲ; ಅಗಲಿದರೆ ತಂದೆ ಸತ್ತುಹೋದಾರು,’ ಎಂದು ಒಡೆಯರಾದ ತಮಗೆ ತಿಳಿಸಿದೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ನಮ್ಮ ಒಡೆಯನಿಗೆ, ‘ಆ ಹುಡುಗನು ನಮ್ಮ ತಂದೆಯನ್ನು ಬಿಡಕೂಡದು. ಅವನು ತಂದೆಯನ್ನು ಬಿಟ್ಟರೆ, ಅವನು ಸಾಯುವನು,’ ಎಂದು ಹೇಳಿದೆವು.