Genesis 44:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನೀವು ನಮಗೆ, ‘ನೀವು ಆ ಕಿರಿಯ ಸಹೋದರನನ್ನು ಕರೆದುಕೊಂಡು ಬರಲೇಬೇಕು; ಇಲ್ಲವಾದರೆ, ನಾನು ನಿಮಗೆ ದವಸಧಾನ್ಯಗಳನ್ನು ಮತ್ತೆ ಮಾರುವುದಿಲ್ಲ’ ಎಂದು ಹೇಳಿದಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ನೀವು, ‘ನಿಮ್ಮ ತಮ್ಮನು ನಿಮ್ಮ ಸಂಗಡ ಬಾರದಿದ್ದರೆ ನೀವು ಇನ್ನೊಂದು ಸಾರಿ ನನ್ನ ಮುಖವನ್ನು ನೋಡಬಾರದು’ ಎಂದು ಅಪ್ಪಣೆಕೊಟ್ಟಿರಿ.
Kannada BSI Bible 2016
ಆಗ ನೀನು ನಿನ್ನ ದಾಸರಿಗೆ--ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲಿಗೆ ಬಾರದಿದ್ದರೆ ಇನ್ನು ಮೇಲೆ ನನ್ನ ಮುಖವನ್ನು ನೋಡಬಾರದು ಎಂದು ನೀನು ಹೇಳಿದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ - ನಿಮ್ಮ ತಮ್ಮನು ಸಂಗಡ ಬಾರದಿದ್ದರೆ ನೀವು ಇನ್ನೊಂದು ಸಾರಿ ನನ್ನ ಮುಖವನ್ನು ನೋಡಕೂಡದು ಎಂದು ಅಪ್ಪಣೆಕೊಟ್ಟಿಯಷ್ಟೆ.
Kannada Bible (KNCL) BSI 2016
ಅದಕ್ಕೆ ತಾವು, 'ನಿಮ್ಮ ತಮ್ಮನು ಬಾರದಿದ್ದರೆ ನೀವು ಮತ್ತೊಮ್ಮೆ ನನ್ನ ಮುಖವನ್ನು ನೋಡಕೂಡದು,’ ಎಂದು ಆಜ್ಞೆಕೊಟ್ಟಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನೀವು ನಿನ್ನ ದಾಸರಿಗೆ, ‘ನಿಮ್ಮ ಚಿಕ್ಕ ತಮ್ಮನು ನಿಮ್ಮ ಸಂಗಡ ಇಲ್ಲಿಗೆ ಬಾರದಿದ್ದರೆ, ಇನ್ನು ಮೇಲೆ ನನ್ನ ಮುಖವನ್ನು ನೋಡಬಾರದು,’ ಎಂದು ಹೇಳಿದೆ.