Genesis 44:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಒಬ್ಬ ಮಗನನ್ನು ಕಳುಹಿಸಿಕೊಟ್ಟಾಗ, ಅವನು ಕ್ರೂರ ಪ್ರಾಣಿಯಿಂದ ಕೊಲ್ಲಲ್ಪಟ್ಟನು; ಇಂದಿನ ತನಕ ನಾನು ಅವನನ್ನು ನೋಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಲ್ಲಿ ಒಬ್ಬನು ನನ್ನ ಬಳಿಯಿಂದ ಹೊರಟು ಹೋದನು. ಅವನು ಸಂದೇಹವಿಲ್ಲದೆ ಮೃಗದಿಂದ ಸೀಳಿ ಹಾಕಲ್ಪಟ್ಟಿರಬೇಕೆಂದು ತಿಳಿದೆನು. ಅಂದಿನಿಂದ ನಾನು ಅವನನ್ನು ಕಾಣಲಿಲ್ಲ.
Kannada BSI Bible 2016
ಒಬ್ಬನು ನನ್ನ ಬಳಿಯಿಂದ ಹೋಗಿಬಿಟ್ಟನು, ಅವನು ಕೊಲ್ಲಲ್ಪಟ್ಟನೆಂದು ಹೇಳಿದರು. ಅವನನ್ನು ಈ ದಿನದ ವರೆಗೂ ನಾನು ನೋಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಲ್ಲಿ ಒಬ್ಬನು ನನ್ನ ಬಳಿಯಿಂದ ಹೊರಟುಹೋದನು; ಅವನು ಸಂದೇಹವಿಲ್ಲದೆ ಮೃಗದಿಂದ ಸೀಳಿಹಾಕಲ್ಪಟ್ಟಿರಬೇಕೆಂದು ತಿಳುಕೊಂಡೆನು; ಅಂದಿನಿಂದ ನಾನು ಅವನನ್ನು ಕಾಣಲಿಲ್ಲ.
Kannada Bible (KNCL) BSI 2016
ಅವರಲ್ಲಿ ಒಬ್ಬನು ನನ್ನನ್ನು ಬಿಟ್ಟು ಹೊರಟುಹೋದ; ಅವನು ನಿಸ್ಸಂದೇಹವಾಗಿ ಕಾಡುಮೃಗದಿಂದ ಸೀಳಿಹಾಕಲ್ಪಟ್ಟಿರಬೇಕು ಎಂದು ತಿಳಿದುಕೊಂಡೆ; ಅಂದಿನಿಂದ ಅವನನ್ನು ನಾನು ಕಂಡಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಬ್ಬನು ನನ್ನ ಬಳಿಯಿಂದ ಹೋಗಿ ಬಿಟ್ಟನು. “ಅವನು ನಿಶ್ಚಯವಾಗಿ ಕಾಡುಮೃಗದಿಂದ ಸೀಳಿ ಸತ್ತಿರಬೇಕು,” ಎಂದು ಹೇಳಿದಿರಿ. ಅವನನ್ನು ನಾನು ಈ ದಿನದವರೆಗೂ ನೋಡಲಿಲ್ಲ.