Genesis 44:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ನನ್ನ ಮತ್ತೊಬ್ಬ ಮಗನನ್ನು ನನ್ನ ಬಳಿಯಿಂದ ಕರೆದುಕೊಂಡು ಹೋಗುವಾಗ ಅವನಿಗೆ ಏನಾದರೂ ಸಂಭವಿಸಿದರೆ, ನಾನು ದುಃಖ ತಾಳಲಾರದೆ ಸತ್ತುಹೋಗುವೆನು’ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈಗ ಇವನನ್ನೂ ನನ್ನ ಬಳಿಯಿಂದ ತೆಗೆದುಕೊಂಡು ಹೋಗಬೇಕೆಂದಿದ್ದೀರಿ. ಇವನಿಗೂ ಕೇಡು ಬಂದರೆ ಈ ಮುದಿ ತಲೆಯು ದುಃಖದಿಂದ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ’ ಎಂದನು.
Kannada BSI Bible 2016
(ಈಗ) ನನ್ನ ಬಳಿಯಿಂದ ಇವನನ್ನೂ ತಕ್ಕೊಂಡು ಹೋಗ ಬೇಕೆಂದಿದೀರಿ, ಅವನಿಗೂ ಕೇಡು ಬಂದರೆ ನನ್ನ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ಇಳಿಯ ಮಾಡುವಿರಿ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈಗ ಇವನನ್ನೂ ನನ್ನ ಬಳಿಯಿಂದ ತೆಗೆದುಕೊಂಡು ಹೋಗಬೇಕೆಂದಿದ್ದೀರಿ. ಇವನಿಗೂ ಕೇಡು ಬಂದರೆ ಈ ಮುದಿತಲೆ ದುಃಖದಿಂದಲೇ ಪಾತಾಳಕ್ಕೆ ಸೇರಲು ನೀವು ಕಾರಣರಾಗುವಿರಿ ಅಂದನು.
Kannada Bible (KNCL) BSI 2016
ಈಗ ಇವನನ್ನೂ ನನ್ನ ಬಳಿಯಿಂದ ತೆಗೆದುಕೊಂಡು ಹೋಗಬೇಕೆಂದಿದ್ದೀರಿ. ಇವನಿಗೂ ಏನಾದರು ಆಪತ್ತು ಒದಗಿದರೆ, ಈ ನರೆಕೂದಲಿನ ಮುದುಕ ಸಂಕಟದಿಂದ ಸಮಾಧಿ ಸೇರಲು ನೀವೇ ಕಾರಣರಾಗುತ್ತೀರಿ’ ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ಇವನನ್ನೂ ನನ್ನ ಬಳಿಯಿಂದ ತೆಗೆದುಕೊಂಡು ಹೋಗಬೇಕೆಂದಿದ್ದೀರಿ. ಅವನಿಗೂ ಕೇಡು ಬಂದರೆ, ನನ್ನ ಮುದಿ ತಲೆಯು ದುಃಖದಿಂದ ಸಮಾಧಿಗೆ ಇಳಿಯುವಂತೆ ಮಾಡುವಿರಿ,’ ಎಂದು ಹೇಳಿದನು.