Genesis 44:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಮ್ಮ ತಂದೆಯೂ ಆ ಕೂಡಲೇ ಸತ್ತುಹೋಗುವನು; ನಮ್ಮ ತಂದೆ ದುಃಖದಿಂದ ಸಾಯಲು ನಾವೇ ಕಾರಣರಾಗುವೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಹುಡುಗನು ನಮ್ಮ ಸಂಗಡ ಇಲ್ಲದೆ ಇರುವುದನ್ನು ತಿಳಿದ ಕೂಡಲೇ ನಮ್ಮ ತಂದೆಯು ಸಾಯುವನು. ತಮ್ಮ ಸೇವಕರಾದ ನಾವು ನಮ್ಮ ಮುಪ್ಪಾದ ತಂದೆ ದುಃಖದಿಂದಲೇ ಸಮಾಧಿಗೆ ಸೇರಲು ಕಾರಣರಾಗುವೆವು.
Kannada BSI Bible 2016
ಹುಡುಗನು ನಮ್ಮ ಸಂಗಡ ಇಲ್ಲದೆ ಹೋದರೆ ಆ ಹುಡುಗ ನಿಲ್ಲದ್ದನ್ನು ಕಂಡಾಗಲೇ ಅವನು ಸಾಯುವನು. ನಿನ್ನ ದಾಸನಾಗಿರುವ ನಮ್ಮ ತಂದೆಯ ನರೇಕೂದಲನ್ನು ದುಃಖದಿಂದ ಸಮಾಧಿಗೆ ನಿನ್ನ ದಾಸರು ಇಳಿಯ ಮಾಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಸ್ವಾವಿುಯ ಸೇವಕರಾದ ನಾವು ನಿನ್ನ ಸೇವಕನಾದ ನಮ್ಮ ತಂದೆಯ ಮುದಿತಲೆ ದುಃಖದಿಂದಲೇ ಪಾತಾಳಕ್ಕೆ ಸೇರಲು ಕಾರಣರಾಗುವೆವು.
Kannada Bible (KNCL) BSI 2016
ಆಗ ತಮ್ಮ ಸೇವಕರಾದ ನಾವು, ತಮ್ಮ ಸೇವಕ ಹಾಗು ನರೆಕೂದಲಿನ ಮುದುಕ ಆದ ನಮ್ಮ ತಂದೆ ಸಂಕಟದಿಂದಲೆ ಸಮಾಧಿ ಸೇರಲು ಕಾರಣರಾಗುತ್ತೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹುಡುಗನು ನಮ್ಮ ಸಂಗಡ ಇಲ್ಲದಿರುವುದನ್ನು ಕಂಡಾಗಲೇ ಅವನು ಸಾಯುವನು. ನಿನ್ನ ದಾಸನಾಗಿರುವ ನಮ್ಮ ತಂದೆಯ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ನಿನ್ನ ದಾಸರು ಇಳಿಯುವಂತೆ ಮಾಡುವರು.