Genesis 44:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಾನು ಈ ಯುವಕನ ಜವಾಬ್ದಾರಿಯನ್ನು ವಹಿಸಿಕೊಂಡೆನು. ನಾನು ನನ್ನ ತಂದೆಗೆ, ‘ನಾನು ಇವನನ್ನು ಹಿಂದಕ್ಕೆ ಕರೆದುಕೊಂಡು ಬರದಿದ್ದರೆ ನನ್ನ ಜೀವಮಾನವೆಲ್ಲಾ ನೀನು ನನ್ನನ್ನು ದೂಷಿಸಬಹುದು’ ಎಂದು ಹೇಳಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇವಕನಾದ ನಾನು ತಂದೆಯ ಬಳಿಯಲ್ಲಿ ಈ ಹುಡುಗನಿಗೆ ಹೊಣೆಯಾಗಿ, ‘ನಾನು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬಾರದೆ ಹೋದರೆ, ಎಂದೆಂದಿಗೂ ತಂದೆಗೆ ದೋಷಿಯಾಗಿರುವೆನು’ ಎಂದು ಮಾತು ಕೊಟ್ಟಿದ್ದೇನೆ.
Kannada BSI Bible 2016
ನಿನ್ನ ದಾಸನಾದ ನಾನು ಆ ಹುಡುಗನಿಗೋಸ್ಕರ ನನ್ನ ತಂದೆಯ ಬಳಿಯಲ್ಲಿ ಹೊಣೆ ಯಾಗಿ--ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ ಎಂದೆಂದಿಗೂ ನನ್ನ ತಂದೆಗೆ ದೋಷಿಯಾಗಿರುವೆ ನೆಂದು ಹೇಳಿಕೊಂಡಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇವಕನಾದ ನಾನು ನನ್ನ ತಂದೆಯ ಬಳಿಯಲ್ಲಿ ಈ ಹುಡುಗನಿಗೆ ಹೊಣೆಯಾಗಿ - ನಾನು ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬಾರದಿದ್ದರೆ ತಂದೆಗೆ ತಪ್ಪಿದವನ ದೋಷ ಎಂದೆಂದಿಗೂ ನನಗಿರಲಿ ಎಂದು ಮಾತು ಕೊಟ್ಟೆನು.
Kannada Bible (KNCL) BSI 2016
ಸೇವಕನಾದ ನಾನು ನನ್ನ ತಂದೆಯ ಬಳಿಯಲ್ಲಿ ಈ ಹುಡುಗನಿಗೆ ಹೊಣೆಯಾಗಿದ್ದೇನೆ. ‘ನಾನು ಇವನನ್ನು ನಿಮ್ಮ ಬಳಿಗೆ ಕರೆದುಕೊಂಡು ಬಾರದಿದ್ದರೆ, ತಂದೆಗೆ ತಪ್ಪಿದವನ ದೋಷ ಸದಾಕಾಲ ನನ್ನದಾಗಲಿ’ ಎಂದು ಮಾತುಕೊಟ್ಟೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನಿನ್ನ ದಾಸನಾದ ನಾನು, ಆ ಹುಡುಗನಿಗೋಸ್ಕರ ನನ್ನ ತಂದೆಯ ಬಳಿಯಲ್ಲಿ ಹೊಣೆಯಾಗಿ, ‘ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ, ಎಂದೆಂದಿಗೂ ನನ್ನ ತಂದೆಗೆ ದೋಷಿಯಾಗಿರುವೆನು,’ ಎಂದು ಹೇಳಿಕೊಂಡಿದ್ದೇನೆ.