Genesis 44:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ನಾನು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ಈ ಯುವಕನು ತನ್ನ ಸಹೋದರರೊಂದಿಗೆ ಹಿಂತಿರುಗಿ ಹೋಗಲಿ; ನಾನು ಇಲ್ಲಿ ನಿಮಗೆ ಗುಲಾಮನಾಗಿರುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆದುದರಿಂದ ಸೇವಕನಾದ ನಾನು ಈ ಹುಡುಗನ ಬದಲಾಗಿ ಸ್ವಾಮಿಗೆ ಗುಲಾಮನಾಗುವಂತೆಯೂ ಇವನು ತನ್ನ ಅಣ್ಣಂದಿರ ಸಂಗಡ ಹೋಗುವಂತೆಯೂ ಅನುಗ್ರಹ ಮಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.
Kannada BSI Bible 2016
ಹಾಗಿದ್ದಲ್ಲಿ ಆ ಹುಡು ಗನ ಬದಲಾಗಿ ನಿನ್ನ ದಾಸನಾದ ನಾನು ನನ್ನ ಒಡೆಯನಿಗೆ ದಾಸನಾಗಿರುವೆನು; ಹುಡುಗನು ನನ್ನ ಸಹೋದರರ ಸಂಗಡ ಹೋಗಿಬಿಡಲಿ.ಹುಡುಗನು ನನ್ನ ಬಳಿಯಲ್ಲಿರದೆ ನಾನು ಹೇಗೆ ನನ್ನ ತಂದೆಯ ಬಳಿಗೆ ಹೋಗಲಿ? ಹೋದರೆ ನನ್ನ ತಂದೆಗೆ ಬರುವ ಕೇಡನ್ನು ನಾನು ನೋಡ ಬೇಕಾದೀತು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಸೇವಕನಾದ ನಾನು ಈ ಹುಡುಗನಿಗೆ ಬದಲಾಗಿ ಸ್ವಾವಿುಗೆ ಗುಲಾಮನಾಗುವಂತೆಯೂ ಇವನು ತನ್ನ ಅಣ್ಣಂದಿರ ಸಂಗಡ ಹೋಗುವಂತೆಯೂ ಅನುಗ್ರಹ ಮಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.
Kannada Bible (KNCL) BSI 2016
ಆದುದರಿಂದ ತಮ್ಮಲ್ಲಿ ನಾನು ಮಾಡುವ ಪ್ರಾರ್ಥನೆ ಇದು; ಈ ಹುಡುಗನಿಗೆ ಬದಲಾಗಿ, ತಮ್ಮ ಸೇವಕನಾದ ನನ್ನನ್ನು ತಮ್ಮ ಗುಲಾಮನನ್ನಾಗಿ ಇರಿಸಿಕೊಳ್ಳಿ; ಇವನು ತನ್ನ ಅಣ್ಣಂದಿರ ಸಂಗಡ ಹೋಗುವಂತೆ ಅನುಗ್ರಹಿಸಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಹಾಗಿದ್ದಲ್ಲಿ ಆ ಹುಡುಗನ ಬದಲಾಗಿ ನಿನ್ನ ದಾಸನಾದ ನಾನು ನನ್ನ ಒಡೆಯನಿಗೆ ದಾಸನಾಗಿರುವೆನು. ಹುಡುಗನು ನನ್ನ ಸಹೋದರರ ಸಂಗಡ ಹೋಗಿಬಿಡಲಿ.