Genesis 44:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಜೊತೆಯಲ್ಲಿ ಈ ಹುಡುಗನಿಲ್ಲದೆ ನಾನು ನನ್ನ ತಂದೆಯ ಬಳಿಗೆ ಹಿಂತಿರುಗಿ ಹೋಗಲು ಸಾಧ್ಯವಿಲ್ಲ. ನಮ್ಮ ತಂದೆಗೆ ಸಂಭವಿಸುವುದನ್ನು ನೋಡಲು ನನಗೆ ತುಂಬ ಭಯವಾಗಿದೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಹುಡುಗನನ್ನು ಬಿಟ್ಟು ನಾನು ನನ್ನ ತಂದೆಯ ಬಳಿಗೆ ಹೇಗೆ ಹೋಗಲಿ? ಹೋದರೆ, ನನ್ನ ತಂದೆಗೆ ಆಗುವ ಆಘಾತ, ದುಃಖ ನನ್ನಿಂದ ನೋಡಲಾಗದು” ಎಂದನು.
Kannada BSI Bible 2016
ಹುಡುಗನು ನನ್ನ ಬಳಿಯಲ್ಲಿರದೆ ನಾನು ಹೇಗೆ ನನ್ನ ತಂದೆಯ ಬಳಿಗೆ ಹೋಗಲಿ? ಹೋದರೆ ನನ್ನ ತಂದೆಗೆ ಬರುವ ಕೇಡನ್ನು ನಾನು ನೋಡ ಬೇಕಾದೀತು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಹುಡುಗನನ್ನು ಬಿಟ್ಟು ನಾನು ನನ್ನ ತಂದೆಯ ಬಳಿಗೆ ಹೇಗೆ ಹೋಗುವದಕ್ಕಾದೀತು? ತಂದೆಗೆ ಮಹಾ ಶೋಕವುಂಟಾಗುವದನ್ನು ನಾನು ನೋಡಕೂಡದು ಅಂದನು.
Kannada Bible (KNCL) BSI 2016
ಈ ಹುಡುಗನನ್ನು ಬಿಟ್ಟು ನಾನು ನನ್ನ ತಂದೆಯ ಬಳಿಗೆ ಹೇಗೆ ತಾನೆ ಹೋಗಲಾದೀತು? ತಂದೆಗೆ ಉಂಟಾಗುವ ಮನೋಯಾತನೆಯನ್ನು ನನ್ನಿಂದ ನೋಡಲಾಗದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹುಡುಗನು ನನ್ನ ಬಳಿಯಲ್ಲಿರದೆ, ನಾನು ಹೇಗೆ ನನ್ನ ತಂದೆಯ ಬಳಿಗೆ ಹೋಗಲಿ? ಹೋದರೆ ನನ್ನ ತಂದೆಗೆ ಬರುವ ಕೇಡನ್ನು ನಾನು ನೋಡಬೇಕಾದೀತು,” ಎಂದನು.