Genesis 44:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಬಟ್ಟಲಿನಲ್ಲಿ ನನ್ನ ಒಡೆಯನು ಕುಡಿಯುತ್ತಾನೆ. ದೇವರಿಗೆ ಪ್ರಶ್ನೆಗಳನ್ನು ಕೇಳಲು ಅವನು ಈ ಬಟ್ಟಲನ್ನೇ ಉಪಯೋಗಿಸುವನು. ನೀವು ಅವನ ಬಟ್ಟಲನ್ನು ಕದ್ದುಕೊಂಡು ತಪ್ಪುಮಾಡಿದಿರಿ’ ಎಂದು ಹೇಳು” ಎಂಬುದಾಗಿ ತಿಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಪಾತ್ರೆಯಲ್ಲಿ ನನ್ನ ದಣಿಯು ಪಾನಮಾಡುತ್ತಾನಲ್ಲವೇ? ಅವನು ದೈವೋಕ್ತಿಯನ್ನು ಹೇಳುವವನಲ್ಲವೆ? ನೀವು ಹೀಗೆ ಮಾಡಿದ್ದು ಕೆಟ್ಟಕೆಲಸ” ಎಂದು ಅವರಿಗೆ ಹೇಳು ಎಂದನು.
Kannada BSI Bible 2016
ಆ ಪಾತ್ರೆಯು ನನ್ನ ಒಡೆಯನು ಕುಡಿಯುವ ಪಾತ್ರೆಯಲ್ಲವೋ? ಅದರಿಂದ ನಿಜವಾ ಗಿಯೂ ಅವನು ದೈವೋಕ್ತಿಯನ್ನು ಹೇಳುವನಲ್ಲಾ? ನೀವು ಹೀಗೆ ಮಾಡಿದ್ದು ಕೆಟ್ಟದ್ದಾಗಿದೆ ಎಂದು ಅವರಿಗೆ ಹೇಳು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಪಾತ್ರೆಯಲ್ಲಿ ನನ್ನ ದಣಿಯು ಪಾನಮಾಡುತ್ತಾನಲ್ಲವೇ. ಅದರಲ್ಲಿ ನೋಡಿ ಶಕುನ ಹೇಳುವದಿಲ್ಲವೇ. ನೀವು ಮಾಡಿದ್ದು ಬಹಳ ಕೆಟ್ಟದ್ದು ಅನ್ನಬೇಕೆಂದು ಹೇಳಿದನು.
Kannada Bible (KNCL) BSI 2016
ಆ ಪಾತ್ರೆಯಿಂದಲೆ ಅಲ್ಲವೆ ನನ್ನ ದಣಿ ಪಾನಮಾಡುವುದು? ಅದರಲ್ಲಿ ನೋಡೇ ಅಲ್ಲವೆ ಶಕುನ ಹೇಳುವುದು? ನೀವು ಮಾಡಿರುವುದು ಮಹಾ ನೀಚತನ, ಎನ್ನಬೇಕು,” ಎಂದು ತಿಳಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಪಾತ್ರೆಯು ನನ್ನ ಒಡೆಯನು ಕುಡಿಯುವ ಪಾತ್ರೆಯಲ್ಲವೋ? ಅದರಿಂದ ನಿಜವಾಗಿಯೂ ಅವನು ದೈವೋಕ್ತಿಯನ್ನು ಹೇಳುವನಲ್ಲಾ? ನೀವು ಹೀಗೆ ಮಾಡಿದ್ದು ಕೆಟ್ಟದ್ದಾಗಿದೆ,’ ಎಂದು ಅವರಿಗೆ ಹೇಳು,” ಎಂದನು.