Genesis 44:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೊದಲು ನಮ್ಮ ಚೀಲಗಳಲ್ಲಿ ಸಿಕ್ಕಿದ ಹಣವನ್ನು ನಾವು ಕಾನಾನ್ ದೇಶದಿಂದ ಮತ್ತೆ ತಂದುಕೊಟ್ಟೆವು. ಆದ್ದರಿಂದ ಖಂಡಿತವಾಗಿ ನಾವು ನಿನ್ನ ಒಡೆಯನ ಮನೆಯಿಂದ ಬೆಳ್ಳಿಯನ್ನಾಗಲಿ ಬಂಗಾರವನ್ನಾಗಲಿ ಕದ್ದುಕೊಂಡಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೊದಲು ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಾವು ಕಾನಾನ್ ದೇಶದಿಂದ ತಿರುಗಿ ನಿಮಗೆ ಕೊಡಲು ತಂದೆವು. ಹೀಗಿರುವಾಗ ನಾವು ನಿನ್ನ ದಣಿಯ ಮನೆಯೊಳಗಿಂದ ಬೆಳ್ಳಿ ಬಂಗಾರವನ್ನು ಹೇಗೆ ಕದ್ದುಕೊಂಡೇವು?
Kannada BSI Bible 2016
ಇಗೋ, ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಿಮಗೆ ಕೊಡುವದಕ್ಕೆ ಕಾನಾನ್‌ ದೇಶದಿಂದ ತಂದೆವು. ಹೀಗಿರಲು ನಿನ್ನ ಯಜಮಾನನ ಮನೆಯೊಳಗಿಂದ ಬೆಳ್ಳಿ ಬಂಗಾರವನ್ನು ಹೇಗೆ ಕದ್ದುಕೊಂಡೇವು?
Kannada BSI JV (ಕನ್ನಡ ಸತ್ಯವೇದವು J.V. (BSI))
ಮೊದಲು ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಾವು ಕಾನಾನ್‍ದೇಶದಿಂದ ತಿರಿಗಿ ತಂದು ನಿನಗೆ ಕೊಟ್ಟೆವಲ್ಲವೇ. ಹೀಗಿರುವಾಗ ನಾವು ನಿನ್ನ ದಣಿಯ ಮನೆಯೊಳಗಿಂದ ಬೆಳ್ಳಿಬಂಗಾರವನ್ನು ಹೇಗೆ ಕದ್ದುಕೊಂಡೇವು.
Kannada Bible (KNCL) BSI 2016
ಮೊದಲು ನಮ್ಮ ಚೀಲಗಳ ಬಾಯಲ್ಲಿ ಸಿಕ್ಕಿದ ಹಣವನ್ನು ನಾವು ಕಾನಾನ್ ನಾಡಿನಿಂದ ವಾಪಸ್ಸು ತಂದು ನಿಮಗೆ ಕೊಟ್ಟೆವಲ್ಲವೆ? ಹೀಗಿರುವಾಗ ನಾವು ನಿಮ್ಮ ದಣಿಯ ಮನೆಯೊಳಗಿಂದ ಬೆಳ್ಳಿಬಂಗಾರ ಕದಿಯುವುದುಂಟೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಿಮಗೆ ಕೊಡುವುದಕ್ಕೆ ಕಾನಾನ್ ದೇಶದಿಂದ ತಂದೆವು. ಹೀಗಿರಲು ನಿನ್ನ ಯಜಮಾನನ ಮನೆಯೊಳಗಿಂದ ಬೆಳ್ಳಿಬಂಗಾರವನ್ನು ಹೇಗೆ ಕದ್ದುಕೊಂಡೇವು?