Genesis 44:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಬೆಳ್ಳಿಯ ಬಟ್ಟಲನ್ನು ನಮ್ಮ ಯಾರ ಚೀಲಗಳಲ್ಲಿ ಕಂಡರೂ, ಆ ವ್ಯಕ್ತಿಯು ಸಾಯಲಿ, ನೀನು ಅವನನ್ನು ಕೊಲ್ಲಬಹುದು; ನಾವು ನಿನ್ನ ಗುಲಾಮರಾಗಿರುವೆವು” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಪಾತ್ರೆಯು ನಿನ್ನ ಸೇವಕರೊಳಗೆ ಯಾರ ಬಳಿಯಲ್ಲಿ ಸಿಕ್ಕುತ್ತದೋ, ಅವನು ಮರಣ ದಂಡನೆಯನ್ನು ಹೊಂದಲಿ. ಅದಲ್ಲದೆ ನಾವೆಲ್ಲರೂ ನಮ್ಮ ಸ್ವಾಮಿಗೆ ದಾಸರಾಗುವೆವು” ಎಂದರು.
Kannada BSI Bible 2016
ಅದು ನಿನ್ನ ದಾಸರಲ್ಲಿ ಯಾರ ಹತ್ತಿರ ಸಿಕ್ಕುವದೋ ಅವನು ಸಾಯಲಿ ಮತ್ತು ನಾವು ಸಹ ನಮ್ಮ ಒಡೆಯನಿಗೆ ದಾಸರಾಗುವೆವು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಪಾತ್ರೆಯು ನಿನ್ನ ಸೇವಕರೊಳಗೆ ಯಾರ ಬಳಿಯಲ್ಲಿ ಸಿಕ್ಕುತ್ತದೋ ಅವನು ಮರಣದಂಡನೆಯನ್ನು ಹೊಂದಲಿ; ಅದಲ್ಲದೆ ನಾವೆಲ್ಲರೂ ನಮ್ಮ ಸ್ವಾವಿುಗೆ ದಾಸರಾಗುವೆವು ಅಂದರು.
Kannada Bible (KNCL) BSI 2016
ಆ ಪಾತ್ರೆ ನಿಮ್ಮ ಸೇವಕರಾದ ನಮ್ಮಲ್ಲಿ ಯಾರಾದರ ಬಳಿ ಸಿಕ್ಕಿದ್ದಾದರೆ ಅವನಿಗೆ ಮರಣದಂಡನೆ ಆಗಲಿ! ಅದುಮಾತ್ರವಲ್ಲ, ನಾವೆಲ್ಲರೂ ನಮ್ಮೊಡೆಯರಿಗೆ ಊಳಿಗದವರಾಗುತ್ತೇವೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ನಿನ್ನ ದಾಸರಲ್ಲಿ ಯಾರ ಹತ್ತಿರ ಸಿಕ್ಕುವುದೋ ಅವನು ಸಾಯಲಿ ಮತ್ತು ನಾವು ಸಹ ನಮ್ಮ ಒಡೆಯನಿಗೆ ದಾಸರಾಗುವೆವು,” ಎಂದರು.