Genesis 45:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಸೇಫನು ಇದನ್ನು ಕೇಳಿ ತನ್ನ ಎದುರಿನಲ್ಲಿದ್ದವರ ಮುಂದೆ ತಾಳಿಕೊಳ್ಳಲಾರದೆ, “ಇಲ್ಲಿರುವ ಎಲ್ಲರನ್ನೂ ಹೊರಗೆ ಕಳುಹಿಸಿರಿ” ಎಂದು ಅಪ್ಪಣೆಕೊಟ್ಟನು. ಅಲ್ಲಿದ್ದವರು ಹೊರಗೆ ಹೋದರು; ಸಹೋದರರು ಮಾತ್ರ ಯೋಸೇಫನೊಡನೆ ಇದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಸೇಫನು ಇದನ್ನು ಕೇಳಿ ತನ್ನ ಎದುರಿನಲ್ಲಿ ನಿಂತಿದ್ದವರ ಮುಂದೆ ದುಃಖವನ್ನು ತಾಳಲಾರದೆ, “ಎಲ್ಲರನ್ನು ನನ್ನ ಬಳಿಯಿಂದ ಹೊರಗೆ ಕಳುಹಿಸಿರಿ” ಎಂದು ಕೂಗಿದನು. ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ ತನ್ನ ಗುರುತು ಸಿಕ್ಕುವಂತೆ ಮಾಡುವ ವೇಳೆಯಲ್ಲಿ ಬೇರೆ ಯಾರೂ ಹತ್ತಿರ ಇರಲಿಲ್ಲ.
Kannada BSI Bible 2016
ಆಗ ಯೋಸೇಫನು ತನ್ನ ಸುತ್ತಲೂ ನಿಂತಿದ್ದವರ ಮುಂದೆ ಮನಸ್ಸನ್ನು ಬಿಗಿ ಹಿಡುಕೊಳ್ಳಲಾರದೆ--ಎಲ್ಲರನ್ನೂ ನನ್ನ ಬಳಿಯಿಂದ ಹೊರಗೆ ಹೋಗುವಂತೆ ಮಾಡಿರಿ ಎಂದು ಕೂಗಿದನು. ಯೋಸೇಫನು ತನ್ನ ಸಹೋದರರಿಗೆ ತನ್ನನ್ನು ಪ್ರಕಟಿಸಿ ಕೊಂಡಾಗ ಅಲ್ಲಿ ಬೇರೆ ಯಾರೂ ಇರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಸೇಫನು ಇದನ್ನು ಕೇಳಿ ತನ್ನ ಎದುರಿನಲ್ಲಿದ್ದವರ ಮುಂದೆ ತಾಳಲಾರದೆ - ನನ್ನ ಬಳಿಯಿಂದ ಎಲ್ಲರನ್ನೂ ಆಚೆಗೆ ಕಳುಹಿಸಿರಿ ಎಂದು ಬಾಯಿಬಿಟ್ಟು ಹೇಳಿದನು. ಯೋಸೇಫನು ಅಣ್ಣತಮ್ಮಂದಿರಿಗೆ ತನ್ನ ಗುರುತು ಸಿಕ್ಕುವಂತೆ ಮಾಡುವ ವೇಳೆಯಲ್ಲಿ ಇತರರು ಯಾರೂ ಹತ್ತರ ಇರಲಿಲ್ಲ.
Kannada Bible (KNCL) BSI 2016
ಇದನ್ನು ಕೇಳಿದ ಮೇಲೆ ತನ್ನ ಪರಿವಾರದವರ ಮುಂದೆ, ತನ್ನನ್ನೇ ಇನ್ನು ತಡೆಹಿಡಿದುಕೊಳ್ಳಲು ಜೋಸೆಫನಿಂದ ಆಗಲಿಲ್ಲ. “ಇಲ್ಲಿಂದ ಎಲ್ಲರನ್ನು ಆಚೆ ಕಳಿಸಿರಿ,” ಎಂದು ಬಾಯ್ತೆರೆದು ಹೇಳಿದ. ಜೋಸೆಫನ ಅಣ್ಣತಮ್ಮಂದಿರಿಗೆ ತನ್ನ ಪರಿಚಯ ಸಿಗುವಂತೆ ಮಾಡುವಾಗ ಇತರರು ಯಾರೂ ಹತ್ತಿರ ಇರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೋಸೇಫನು ತನ್ನ ಸುತ್ತಲೂ ನಿಂತಿದ್ದವರ ಮುಂದೆ ಮನಸ್ಸನ್ನು ಬಿಗಿಹಿಡಿದುಕೊಳ್ಳಲು ಆಗಲಿಲ್ಲ. “ಎಲ್ಲರನ್ನೂ ತನ್ನ ಬಳಿಯಿಂದ ಹೊರಗೆ ಹೋಗುವಂತೆ ಮಾಡಿರಿ,” ಎಂದು ಕೂಗಿದನು. ಯೋಸೇಫನು ತನ್ನ ಸಹೋದರರಿಗೆ ತನ್ನನ್ನು ಪರಿಚಯಿಸಿಕೊಳ್ಳಲು ಹೋದಾಗ, ಅಲ್ಲಿ ಬೇರೆ ಯಾರೂ ಇರಲಿಲ್ಲ.