Genesis 45:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಗೋಷೆನ್ ಪ್ರಾಂತ್ಯದಲ್ಲಿ ನನ್ನೊಂದಿಗೆ ವಾಸಿಸುವೆ. ನೀನೂ ನಿನ್ನ ಮಕ್ಕಳೂ ನಿನ್ನ ಮೊಮ್ಮಕ್ಕಳೂ ನಿಮ್ಮ ಎಲ್ಲಾ ಪಶುಗಳೊಡನೆ ಇಲ್ಲಿ ನೆಲೆಸಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗೋಷೆನ್ ಸೀಮೆಯಲ್ಲಿ ನೀನು ವಾಸಮಾಡಬಹುದು. ನೀನೂ, ನಿನ್ನ ಮಕ್ಕಳೂ, ಮೊಮ್ಮಕ್ಕಳೂ, ಕುರಿದನಗಳೂ ಮೊದಲಾದ ಎಲ್ಲವೂ ನನ್ನ ಬಳಿಯಲ್ಲೇ ಇರಬೇಕು.
Kannada BSI Bible 2016
ಗೋಷೆನ್ ದೇಶದಲ್ಲಿ ನೀನು ವಾಸವಾಗಿದ್ದು ನಿನ್ನ ಮಕ್ಕಳೂ ಮೊಮ್ಮಕ್ಕಳೂ ದನ ಕುರಿಗಳೂ ನಿನಗಿದ್ದದ್ದೆಲ್ಲವೂ ನನ್ನ ಸವಿಾಪ ದಲ್ಲಿರಬೇಕು;
Kannada BSI JV (ಕನ್ನಡ ಸತ್ಯವೇದವು J.V. (BSI))
ಗೋಷೆನ್ ಸೀಮೆಯಲ್ಲಿ ನೀನು ವಾಸಮಾಡಬಹುದು; ನೀನೂ ನಿನ್ನ ಮಕ್ಕಳೂ ಮೊಮ್ಮಕ್ಕಳೂ ಕುರಿ ದನ ಮೊದಲಾದ ಸ್ವಾಸ್ತ್ಯಸಹಿತರಾಗಿ ನನ್ನ ಬಳಿಯಲ್ಲೇ ಇರಬಹುದು;
Kannada Bible (KNCL) BSI 2016
ಗೋಷೆನ್ ಪ್ರಾಂತ್ಯದಲ್ಲಿ ನನ್ನ ಬಳಿಯಲ್ಲೇ ನೀವೂ ನಿಮ್ಮ ಮಕ್ಕಳೂ ಮೊಮ್ಮಕ್ಕಳೂ ದನ, ಕುರಿ ಮೊದಲಾದ ಆಸ್ತಿಪಾಸ್ತಿಗಳ ಸಮೇತ ವಾಸಮಾಡಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗೋಷೆನ್ ಪ್ರದೇಶದಲ್ಲಿ ನೀನು ವಾಸವಾಗಿದ್ದು ನಿನ್ನ ಮಕ್ಕಳೂ, ಮೊಮ್ಮಕ್ಕಳೂ, ದನಕುರಿಗಳೂ, ನಿನಗಿದ್ದದ್ದೆಲ್ಲವೂ ನನ್ನ ಸಮೀಪದಲ್ಲಿರಬೇಕು.