Genesis 45:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ತಂದೆಯನ್ನೂ ತಮ್ಮ ಕುಟುಂಬಗಳನ್ನೂ ನನ್ನ ಬಳಿಗೆ ಕರೆದುಕೊಂಡು ಬರಲಿ. ಅವರು ಈಜಿಪ್ಟಿನ ಒಳ್ಳೆಯ ಪ್ರದೇಶದಲ್ಲಿ ವಾಸಿಸಲಿ. ಇಲ್ಲಿರುವ ಉತ್ತಮವಾದ ಆಹಾರವನ್ನು ಅವರು ಊಟಮಾಡಲಿ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ತಂದೆಯನ್ನೂ ಮನೆಯವರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ನಾನು ನಿಮಗೆ ಐಗುಪ್ತ ದೇಶದಲ್ಲಿ ದೊರಕುವ ಉತ್ತಮ ವಸ್ತುಗಳನ್ನು ನಿಮಗೆ ಕೊಡುವೆನು ಮತ್ತು ನೀವು ಈ ದೇಶದ ಸುಖವನ್ನು ಅನುಭವಿಸುವಿರಿ.
Kannada BSI Bible 2016
ನಿಮ್ಮ ತಂದೆಯನ್ನೂ ನಿಮ್ಮ ನಿಮ್ಮ ಮನೆಯವರನ್ನೂ ಕರಕೊಂಡು ನನ್ನ ಬಳಿಗೆ ಬನ್ನಿರಿ. ಐಗುಪ್ತದೇಶದ ಉತ್ತಮವಾದದ್ದನ್ನು ನಾನು ನಿಮಗೆ ಕೊಡುವೆನು. ಈ ದೇಶದ ಸಾರವನ್ನು ಊಟಮಾಡುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ತಂದೆಯನ್ನೂ ಮನೆಯವರನ್ನೂ ನನ್ನ ಬಳಿಗೆ ಕರಕೊಂಡು ಬನ್ನಿರಿ; ಐಗುಪ್ತದೇಶದಲ್ಲಿ ದೊರಕುವ ಉತ್ತಮ ವಸ್ತುಗಳನ್ನು ನಿಮಗೆ ಕೊಡುವೆನು, ಮತ್ತು ನೀವು ಈ ದೇಶದ ಸುಖವನ್ನು ಅನುಭವಿಸಬಹುದು.
Kannada Bible (KNCL) BSI 2016
ನಿಮ್ಮ ತಂದೆಯನ್ನೂ ಕುಟುಂಬದವರನ್ನೂ ನನ್ನ ಬಳಿಗೆ ಕರೆದುಕೊಂಡು ಬರತಕ್ಕದ್ದು. ಈಜಿಪ್ಟ್ ದೇಶದಲ್ಲಿ ನಿಮಗೆ ಅತ್ಯುತ್ತಮವಾದ ಭೂಮಿಯನ್ನು ಕೊಡುವೆನು. ನೀವು ಈ ದೇಶದ ಸುಖಸಂಪತ್ತನ್ನು ಅನುಭವಿಸಬಹುದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ತಂದೆಯನ್ನೂ, ಕುಟುಂಬದವರನ್ನೂ ಕರೆದುಕೊಂಡು ನನ್ನ ಬಳಿಗೆ ಬನ್ನಿರಿ. ಈಜಿಪ್ಟ್ ದೇಶದ ಸುಖಸಂಪತ್ತನ್ನು ಅನುಭವಿಸಬಹುದು.’