Genesis 45:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಸೇಫನು ಪ್ರತಿಯೊಬ್ಬ ಸಹೋದರನಿಗೂ ಒಂದೊಂದು ಜೊತೆ ಸುಂದರವಾದ ಉಡುಪುಗಳನ್ನು ಕೊಟ್ಟನು. ಆದರೆ ಬೆನ್ಯಾಮೀನನಿಗೆ ಮಾತ್ರ ಐದು ಜೊತೆ ಸುಂದರವಾದ ಉಡುಪುಗಳನ್ನೂ ಮುನ್ನೂರು ಬೆಳ್ಳಿಯ ನಾಣ್ಯಗಳನ್ನೂ ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಪ್ರತಿಯೊಬ್ಬನಿಗೂ ಶ್ರೇಷ್ಠ ವಸ್ತ್ರಗಳನ್ನು ಕೊಟ್ಟನು. ಬೆನ್ಯಾಮೀನನಿಗೋ ಮುನ್ನೂರು ಬೆಳ್ಳಿ ನಾಣ್ಯಗಳನ್ನೂ ಹಾಗೂ ಐದು ಶ್ರೇಷ್ಠ ವಸ್ತ್ರಗಳನ್ನೂ ಕೊಟ್ಟನು.
Kannada BSI Bible 2016
ಅವರೆಲ್ಲರಿಗೆ ಒಂದೊಂದು ಜೊತೆ ವಸ್ತ್ರಗಳನ್ನೂ ಬೆನ್ಯಾವಿಾನನಿಗೆ ಮುನ್ನೂರು ಬೆಳ್ಳಿಯ ನಾಣ್ಯಗಳನ್ನೂ ಐದು ಜೊತೆ ವಸ್ತ್ರಗಳನ್ನೂ ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಪ್ರತಿಯೊಬ್ಬನಿಗೂ ಶ್ರೇಷ್ಠ ವಸ್ತ್ರಗಳನ್ನೂ ಕೊಟ್ಟನು; ಬೆನ್ಯಾಮೀನನಿಗೋ ಮುನ್ನೂರು ರೂಪಾಯಿಗಳನ್ನೂ ಐದು ಶ್ರೇಷ್ಠ ವಸ್ತ್ರಗಳನ್ನೂ ಕೊಟ್ಟನು.
Kannada Bible (KNCL) BSI 2016
ಅದೂ ಅಲ್ಲದೆ, ಪ್ರತಿಯೊಬ್ಬನಿಗೂ ಶ್ರೇಷ್ಠವಾದ ಹೊಸ ಬಟ್ಟೆಗಳನ್ನು ಕೊಟ್ಟನು. ಬೆನ್ಯಾಮೀನನಿಗಾದರೋ ಮುನ್ನೂರು ಬೆಳ್ಳಿನಾಣ್ಯಗಳನ್ನು ಹಾಗು ಐದು ಶ್ರೇಷ್ಠವಾದ ಹೊಸಬಟ್ಟೆಗಳನ್ನು ಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರೆಲ್ಲರಿಗೆ ಬದಲು ವಸ್ತ್ರಗಳನ್ನೂ, ಬೆನ್ಯಾಮೀನನಿಗೆ ಮುನ್ನೂರು ಬೆಳ್ಳಿಯ ನಾಣ್ಯಗಳನ್ನೂ, ಐದು ಬದಲು ವಸ್ತ್ರಗಳನ್ನೂ ಕೊಟ್ಟನು.