Genesis 45:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಸೇಫನು ತನ್ನ ತಂದೆಗೂ ಉಡುಗೊರೆಗಳನ್ನು ಕಳುಹಿಸಿದನು. ಅವನು ಈಜಿಪ್ಟಿನ ಶ್ರೇಷ್ಠವಾದ ವಸ್ತುಗಳನ್ನು ಹತ್ತು ಕತ್ತೆಗಳ ಮೇಲೆ ಕಳುಹಿಸಿದನು. ತನ್ನ ತಂದೆಯ ಮರುಪ್ರಯಾಣಕ್ಕೆ ಬೇಕಾದ ಕಾಳು, ರೊಟ್ಟಿ ಮತ್ತು ಇತರ ಆಹಾರಪದಾರ್ಥಗಳನ್ನೂ ಹತ್ತು ಹೆಣ್ಣುಕತ್ತೆಗಳ ಮೇಲೆ ಹೊರಿಸಿ ಕಳುಹಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತನ್ನ ತಂದೆಗೋಸ್ಕರ ಐಗುಪ್ತ ದೇಶದ ಒಳ್ಳೆಯ ವಸ್ತುಗಳನ್ನು ಹತ್ತು ಕತ್ತೆಗಳ ಮೇಲೆ ಹೇರಿಸಿ, ಹತ್ತು ಹೆಣ್ಣುಕತ್ತೆಗಳ ಮೇಲೆ ತನ್ನ ತಂದೆಗೆ ಪ್ರಯಾಣಕ್ಕೆ ಬೇಕಾದ ದವಸ ಧಾನ್ಯಗಳನ್ನು, ರೊಟ್ಟಿ ಮತ್ತು ಇತರ ಆಹಾರವನ್ನು ಕಳುಹಿಸಿದನು.
Kannada BSI Bible 2016
ಇದಲ್ಲದೆ ಅವನು ತನ್ನ ತಂದೆಗೆ ಹತ್ತು ಕತ್ತೆಗಳು ಹೊರುವಷ್ಟು ಐಗುಪ್ತದ ಶೇಷ್ಠವಾದ ವುಗಳನ್ನೂ ಪ್ರಯಾಣಕ್ಕೋಸ್ಕರ ತನ್ನ ತಂದೆಗೆ ಹತ್ತು ಹೆಣ್ಣು ಕತ್ತೆಗಳು ಹೊರುವಷ್ಟು ಗೋಧಿರೊಟ್ಟಿ ಆಹಾರ ಗಳನ್ನೂ ಕಳುಹಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ತಂದೆಗೋಸ್ಕರ ಐಗುಪ್ತದೇಶದ ಒಳ್ಳೇ ವಸ್ತುಗಳನ್ನು ಹತ್ತು ಕತ್ತೆಗಳ ಮೇಲೆ ಹೇರಿಸಿ ಹತ್ತು ಹೆಣ್ಣುಕತ್ತೆಗಳ ಮೇಲೆ ತನ್ನ ತಂದೆಯ ಪ್ರಯಾಣಕ್ಕೆ ಬೇಕಾದ ದವಸ ಧಾನ್ಯಗಳನ್ನೂ ಬೇರೆ ತಿನ್ನುವ ಪದಾರ್ಥಗಳನ್ನೂ ಕಟ್ಟಿಸಿಕೊಟ್ಟನು.
Kannada Bible (KNCL) BSI 2016
ತನ್ನ ತಂದೆಗೆ ಈಜಿಪ್ಟ್ ದೇಶದ ಒಳ್ಳೊಳ್ಳೆಯ ವಸ್ತುಗಳನ್ನೂ ಹತ್ತು ಗಂಡು ಕತ್ತೆಗಳ ಮೇಲೆ ಹೇರಿಸಿದನು. ಅವನ ಪ್ರಯಾಣಕ್ಕೆ ಹತ್ತು ಹೆಣ್ಣು ಕತ್ತೆಗಳ ಮೇಲೆ ದವಸಧಾನ್ಯಗಳನ್ನೂ ಇತರ ಆಹಾರಪದಾರ್ಥಗಳನ್ನೂ ಕಳಿಸಿಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಅವನು ತನ್ನ ತಂದೆಗೆ ಹತ್ತು ಕತ್ತೆಗಳು ಹೊರುವಷ್ಟು ಈಜಿಪ್ಟಿನ ಶ್ರೇಷ್ಠವಾದವುಗಳನ್ನೂ, ಪ್ರಯಾಣಕ್ಕೋಸ್ಕರ ತಂದೆಗೆ ಹತ್ತು ಹೆಣ್ಣು ಕತ್ತೆಗಳು ಹೊರುವಷ್ಟು ಗೋಧಿ, ರೊಟ್ಟಿ, ಆಹಾರಗಳನ್ನೂ ಕಳುಹಿಸಿದನು.