Genesis 45:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಹೋದರರು ತಮ್ಮ ತಂದೆಗೆ, “ಅಪ್ಪಾ, ಯೋಸೇಫನು ಇನ್ನೂ ಬದುಕಿದ್ದಾನೆ; ಅವನು ಈಜಿಪ್ಟ್ ದೇಶಕ್ಕೆಲ್ಲಾ ರಾಜ್ಯಪಾಲನಾಗಿದ್ದಾನೆ” ಎಂದು ಹೇಳಿದರು. ಅವರ ತಂದೆಗೆ ಆಶ್ಚರ್ಯವಾಯಿತು. ಆತನು ಅವರನ್ನು ನಂಬಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನಿಗೆ, “ಯೋಸೇಫನು ಇನ್ನೂ ಜೀವದಿಂದ ಇದ್ದಾನೆ ಅವನು ಐಗುಪ್ತ ದೇಶದ ಸರ್ವಾಧಿಕಾರಿಯಾಗಿದ್ದಾನೆ” ಎಂದು ತಿಳಿಸಲು, ಅವನು ಆಶ್ಚರ್ಯಪಟ್ಟು ನಂಬಲಿಲ್ಲ.
Kannada BSI Bible 2016
ಯೋಸೇಫನು ಇನ್ನೂ ಜೀವದಿಂದ ಇದ್ದಾನೆ; ಅವನೇ ಐಗುಪ್ತದೇಶವನ್ನೆಲ್ಲಾ ಆಳುತಿದ್ದಾ ನೆಂದು ಅವನಿಗೆ ತಿಳಿಸಿದಾಗ ಅವನು ನಂಬದೆ ಇದ್ದದ್ದರಿಂದ ಹೃದಯವು ಕುಂದಿಹೋಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಸೇಫನು ಇನ್ನೂ ಜೀವದಿಂದಿದ್ದಾನೆ; ಅವನು ಐಗುಪ್ತದೇಶದ ಸರ್ವಾಧಿಕಾರಿಯಾಗಿದ್ದಾನೆ ಎಂದು ತಿಳಿಸಲು ಅವನು ಸ್ತಬ್ಧನಾಗಿ ನಂಬಲಿಲ್ಲ.
Kannada Bible (KNCL) BSI 2016
ತಂದೆ ಯಕೋಬನ ಬಳಿಗೆ ಬಂದು, “ಜೋಸೆಫನು ಇನ್ನೂ ಜೀವದಿಂದಿದ್ದಾನೆ; ಅವನೇ ಈಜಿಪ್ಟ್ ದೇಶದ ಪ್ರಧಾನಮಂತ್ರಿ” ಎಂದು ಅರುಹಿದರು. ಅವನು ಅದನ್ನು ಕೇಳಿ ಸ್ತಬ್ಧನಾದ; ಅವರನ್ನು ನಂಬಲೇ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೋಸೇಫನು ಇನ್ನೂ ಜೀವದಿಂದ ಇದ್ದಾನೆ! ಅವನೇ ಈಜಿಪ್ಟ್ ದೇಶವನ್ನೆಲ್ಲಾ ಆಳುತ್ತಿದ್ದಾನೆ,” ಎಂದು ಅವನಿಗೆ ತಿಳಿಸಿದಾಗ, ಅವನು ಆಶ್ಚರ್ಯಪಟ್ಟನು, ಅವರನ್ನು ನಂಬಲಿಲ್ಲ.