Genesis 45:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಯೋಸೇಫನು ತಮಗೆ ಹೇಳಿದ್ದೆಲ್ಲವನ್ನು ಸಹೋದರರು ತಮ್ಮ ತಂದೆಗೆ ಹೇಳಿದರು. ಆಮೇಲೆ ತನ್ನನ್ನು ಈಜಿಪ್ಟಿಗೆ ಕರೆದುಕೊಂಡು ಬರಲು ಯೋಸೇಫನು ಕಳುಹಿಸಿದ್ದ ರಥಗಳನ್ನು ಯಾಕೋಬನು ನೋಡಿ ಉಲ್ಲಾಸಪಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಯೋಸೇಫನು ಹೇಳಿ ಕಳುಹಿಸಿದ್ದ ಎಲ್ಲಾ ಮಾತುಗಳನ್ನು ಕೇಳಿ ತನ್ನ ಪ್ರಯಾಣಕ್ಕೋಸ್ಕರ ಯೋಸೇಫನ ಕಡೆಯಿಂದ ಬಂದ ರಥಗಳನ್ನು ನೋಡಿದಾಗ ಯಾಕೋಬನ ಆತ್ಮವು ಉಲ್ಲಾಸಗೊಂಡಿತು, ಅಲ್ಲದೆ ಅವನಿಗೆ ಹೊಸ ಜೀವ ಬಂದಂತಾಯಿತು.
Kannada BSI Bible 2016
ಆದರೆ ಯೋಸೇಫನು ತಮಗೆ ಹೇಳಿದ ಎಲ್ಲಾ ಮಾತುಗಳನ್ನು ಅವರು ಯಾಕೋಬನಿಗೆ ಹೇಳಿದ್ದಲ್ಲದೆ ಅವನನ್ನು ಕರಕೊಂಡು ಹೋಗುವದಕ್ಕೆ ಯೋಸೇಫನು ಕಳುಹಿಸಿದ ಬಂಡಿಗಳನ್ನು ಅವನು ನೋಡಿದಾಗ ಅವರ ತಂದೆಯಾದ ಯಾಕೋಬನ ಆತ್ಮವು ಉಜ್ಜೀ ವಿಸಿತು.ಆಗ ಇಸ್ರಾಯೇಲನು--ನನ್ನ ಮಗನಾದ ಯೋಸೇಫನು ಇನ್ನೂ ಜೀವದಿಂದಿದ್ದಾನೆ, ಅದು ಸಾಕು; ನಾನು ಸಾಯುವದಕ್ಕಿಂತ ಮುಂಚೆ ಹೋಗಿ ಅವನನ್ನು ನೋಡುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಯೋಸೇಫನು ಹೇಳಿಕಳುಹಿಸಿದ್ದ ಎಲ್ಲಾ ಮಾತುಗಳನ್ನು ಕೇಳಿ ತನ್ನ ಪ್ರಯಾಣಕ್ಕೋಸ್ಕರ ಯೋಸೇಫನ ಕಡೆಯಿಂದ ಬಂದ ರಥಗಳನ್ನು ನೋಡಿ ಇಸ್ರಾಯೇಲನೆನಿಸಿಕೊಳ್ಳುವ ಅವರ ತಂದೆ ಯಾಕೋಬನು ಚೇತರಿಸಿಕೊಂಡು -
Kannada Bible (KNCL) BSI 2016
ಆದರೆ ಜೋಸೆಫನು ಹೇಳಿಕಳಿಸಿದ ಎಲ್ಲ ಮಾತುಗಳನ್ನು ಕೇಳಿ, ತನ್ನ ಪ್ರಯಾಣಕ್ಕಾಗಿ ಅವನಿಂದ ಬಂದಿದ್ದ ಬಂಡಿಗಳನ್ನು ನೋಡಿ ಅವರ ತಂದೆ ಯಕೋಬನಿಗೆ ಹೊಸ ಜೀವ ಬಂದಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೋಸೇಫನು ತಮಗೆ ಹೇಳಿದ ಎಲ್ಲಾ ಮಾತುಗಳನ್ನು ಅವರು ಯಾಕೋಬನಿಗೆ ಹೇಳಿದರು. ಅವನನ್ನು ಕರೆದುಕೊಂಡು ಹೋಗುವುದಕ್ಕೆ ಯೋಸೇಫನು ಕಳುಹಿಸಿದ ರಥಗಳನ್ನು ಅವನು ನೋಡಿದಾಗ ಯಾಕೋಬನ ಆತ್ಮವು ಉಜ್ಜೀವಿಸಿತು.