Genesis 45:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಸೇಫನು ತನ್ನ ಸಹೋದರರಿಗೆ, “ನಾನು ನಿಮ್ಮ ತಮ್ಮನಾದ ಯೋಸೇಫ. ನನ್ನ ತಂದೆ ಚೆನ್ನಾಗಿದ್ದಾನೆಯೇ?” ಎಂದು ಕೇಳಿದನು. ಆದರೆ ಸಹೋದರರು ಅವನಿಗೆ ಉತ್ತರಿಸಲಿಲ್ಲ. ಅವರಿಗೆ ಭಯವಾಗಿತ್ತು ಮತ್ತು ಗಲಿಬಿಲಿಗೊಂಡಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು, “ತನ್ನ ಅಣ್ಣತಮ್ಮಂದಿರಿಗೆ ನಾನು ಯೋಸೇಫನು, ನನ್ನ ತಂದೆ ಇನ್ನೂ ಇದ್ದಾನೋ?” ಎಂದು ಹೇಳಲು ಅವರು ಅವನ ಮುಂದೆ ತತ್ತರಗೊಂಡು ಉತ್ತರಕೊಡಲಾರದೆ ಹೋದರು.
Kannada BSI Bible 2016
ಯೋಸೇಫನು ತನ್ನ ಸಹೋದರರಿಗೆ--ನಾನು ಯೋಸೇಫನು, ನನ್ನ ತಂದೆಯು ಇನ್ನೂ ಬದುಕಿ ದ್ದಾನೋ ಅಂದನು. ಅದಕ್ಕೆ ಅವನ ಸಹೋದರರು ಅವನ ಮುಂದೆ ಕಳವಳಗೊಂಡವರಾಗಿ ಅವನಿಗೆ ಉತ್ತರ ಕೊಡಲಾರದೆ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತನ್ನ ಅಣ್ಣಂದಿರಿಗೆ - ನಾನು ಯೋಸೇಫನು; ನನ್ನ ತಂದೆ ಇನ್ನೂ ಇದ್ದಾನೋ ಎಂದು ಹೇಳಲು ಅವರು ಅವನ ಮುಂದೆ ತತ್ತರಗೊಂಡು ಉತ್ತರಕೊಡಲಾರದೆ ಹೋದರು.
Kannada Bible (KNCL) BSI 2016
ಜೋಸೆಫನು ತನ್ನ ಅಣ್ಣತಮ್ಮಂದಿರಿಗೆ, “ನಾನೇ ಜೋಸೆಫ್! ನನ್ನ ತಂದೆ ಇನ್ನೂ ಇದ್ದಾರೋ?” ಎಂದು ಕೇಳಿದ. ಅವರು ತತ್ತರಗೊಂಡು ಉತ್ತರಿಸಲಾರದೆ ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಸೇಫನು ತನ್ನ ಸಹೋದರರಿಗೆ, “ನಾನು ಯೋಸೇಫನು! ನನ್ನ ತಂದೆಯು ಬದುಕಿದ್ದಾನೋ?” ಎಂದನು. ಅದಕ್ಕೆ ಅವನ ಸಹೋದರರು ಅವನ ಮುಂದೆ ಕಳವಳಗೊಂಡವರಾಗಿ, ಅವನಿಗೆ ಉತ್ತರ ಕೊಡಲಾರದೆ ಹೋದರು.