Genesis 45:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಯೋಸೇಫನು, “ನನ್ನ ತಂದೆಯ ಬಳಿಗೆ ಬೇಗನೆ ಹೋಗಿ ಅವನಿಗೆ, ನಿನ್ನ ಮಗನಾದ ಯೋಸೇಫನು ಈ ಸಂದೇಶವನ್ನು ಕಳುಹಿಸಿದ್ದಾನೆ: ‘ದೇವರು ನನ್ನನ್ನು ಈಜಿಪ್ಟ್ ದೇಶಕ್ಕೆಲ್ಲಾ ರಾಜ್ಯಪಾಲನನ್ನಾಗಿ ಮಾಡಿದ್ದಾನೆ. ತಡಮಾಡದೆ ನನ್ನ ಬಳಿಗೆ ಬಾ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಬೇಗ ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ, ‘ನಿನ್ನ ಮಗನಾದ ಯೋಸೇಫನು ಹೀಗೆನ್ನುತ್ತಾನೆ, ದೇವರು ನನ್ನನ್ನು ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿ ನೇಮಿಸಿದ್ದಾನೆ. ನೀನು ತಡಮಾಡದೆ ನನ್ನ ಬಳಿಗೆ ಬಾ.
Kannada BSI Bible 2016
ನೀವು ಶೀಘ್ರವಾಗಿ ನನ್ನ ತಂದೆಯ ಬಳಿಗೆ ಹೊರಟುಹೋಗಿ ಅವನಿಗೆ--ನಿನ್ನ ಮಗನಾದ ಯೋಸೇಫನು--ದೇವರು ನನ್ನನ್ನು ಐಗುಪ್ತಕ್ಕೆಲ್ಲಾ ಪ್ರಭುವನ್ನಾಗಿ ಮಾಡಿದ್ದಾನೆ; ತಡ ಮಾಡದೆ ನನ್ನ ಬಳಿಗೆ ಇಳಿದು ಬಾ;
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಬೇಗ ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ - ನಿನ್ನ ಮಗನಾದ ಯೋಸೇಫನು ಹೀಗನ್ನುತ್ತಾನೆ - ದೇವರು ನನ್ನನ್ನು ಐಗುಪ್ತದೇಶಕ್ಕೆ ಸರ್ವಾಧಿಕಾರಿಯನ್ನಾಗಿ ನೇವಿುಸಿದ್ದಾನೆ; ನೀನು ತಡಮಾಡದೆ ನನ್ನ ಬಳಿಗೆ ಬಾ;
Kannada Bible (KNCL) BSI 2016
“ನೀವು ನನ್ನ ತಂದೆಯ ಬಳಿಗೆ ಬೇಗನೆ ಹೋಗಿ ಅವರಿಗೆ, ‘ನಿಮ್ಮ ಮಗ ಜೋಸೆಫ್ ಹೀಗೆನ್ನುತ್ತಾನೆ; ‘ದೇವರು ನನ್ನನ್ನು ಈಜಿಪ್ಟ್ ದೇಶಕ್ಕೆ ಮುಖ್ಯಮಂತ್ರಿಯನ್ನಾಗಿ ನೇಮಿಸಿದ್ದಾರೆ. ನೀವು ತಡಮಾಡದೆ ನನ್ನ ಬಳಿಗೆ ಬರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಶೀಘ್ರವಾಗಿ ನನ್ನ ತಂದೆಯ ಬಳಿಗೆ ಹೊರಟುಹೋಗಿ, ‘ನಿನ್ನ ಮಗ ಯೋಸೇಫನನ್ನು ದೇವರು ಈಜಿಪ್ಟಿಗೆಲ್ಲಾ ಪ್ರಭುವನ್ನಾಗಿ ಮಾಡಿದ್ದಾರೆ, ತಡಮಾಡದೆ ನನ್ನ ಬಳಿಗೆ ಬೇಗ ಬಾ.