Genesis 46:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಇಸ್ರೇಲನು ಈಜಿಪ್ಟಿಗೆ ಪ್ರಯಾಣ ಬೆಳೆಸಿದನು. ಅವನು ಬೇರ್ಷೆಬಕ್ಕೆ ಹೋಗಿ ತನ್ನ ತಂದೆಯಾದ ಇಸಾಕನ ದೇವರನ್ನು ಆರಾಧಿಸಿ ಯಜ್ಞಗಳನ್ನು ಅರ್ಪಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲನು ತನಗಿದ್ದ ಸರ್ವಸ್ವವನ್ನು ತೆಗೆದುಕೊಂಡು, ಪ್ರಯಾಣ ಮಾಡಿ ಬೇರ್ಷೆಬಕ್ಕೆ ಬಂದು ತನ್ನ ತಂದೆಯಾದ ಇಸಾಕನ ದೇವರಿಗೆ ಯಜ್ಞಗಳನ್ನು ಅರ್ಪಿಸಿದನು.
Kannada BSI Bible 2016
ಇಸ್ರಾಯೇಲನು ತನಗಿದ್ದದ್ದನ್ನೆಲ್ಲಾ ತಕ್ಕೊಂಡು ಬೇರ್ಷೆಬಕ್ಕೆ ಬಂದು ತನ್ನ ತಂದೆಯಾದ ಇಸಾಕನ ದೇವರಿಗೆ ಬಲಿಗಳನ್ನು ಅರ್ಪಿಸಿ ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲನು ತನಗಿದ್ದ ಸರ್ವಸ್ವವನ್ನು ತೆಗೆದುಕೊಂಡು ಪ್ರಯಾಣಮಾಡಿ ಬೇರ್ಷಬಕ್ಕೆ ಬಂದು ತನ್ನ ತಂದೆಯಾದ ಇಸಾಕನ ದೇವರಿಗೆ ಯಜ್ಞಗಳನ್ನು ಮಾಡಿದನು.
Kannada Bible (KNCL) BSI 2016
ಯಕೋಬನು ತನಗಿದ್ದ ಸರ್ವಸ್ವವನ್ನು ತೆಗೆದುಕೊಂಡು ಪ್ರಯಾಣಮಾಡಿ ಬೇರ್ಷೆಬಕ್ಕೆ ಬಂದನು. ಅಲ್ಲಿ ತನ್ನ ತಂದೆ ಇಸಾಕನ ದೇವರಿಗೆ ಬಲಿದಾನಗಳನ್ನು ಅರ್ಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲನು ತನಗಿದ್ದದ್ದನ್ನೆಲ್ಲಾ ತೆಗೆದುಕೊಂಡು ಬೇರ್ಷೆಬಕ್ಕೆ ಬಂದು, ತನ್ನ ತಂದೆ ಇಸಾಕನ ದೇವರಿಗೆ ಬಲಿಗಳನ್ನು ಅರ್ಪಿಸಿದನು.