Genesis 46:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್ ಮತ್ತು ಜೆಬುಲೂನ್. ಇವರು ಯಾಕೋಬನ ಹೆಂಡತಿಯಾದ ಲೇಯಳ ಮಕ್ಕಳು. ಲೇಯಳು ಆ ಮಕ್ಕಳಿಗೆ ಪದ್ದನ್‌ಅರಾಮಿನಲ್ಲಿ ಜನ್ಮಕೊಟ್ಟಳು. ಅಲ್ಲಿ ಅವಳ ಮಗಳಾದ ದೀನ ಸಹ ಜನಿಸಿದಳು. ಈ ಕುಟುಂಬದಲ್ಲಿ ಮೂವತ್ಮೂರು ಮಂದಿ ಇದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರೆಲ್ಲರು ಲೇಯಳ ಸಂತತಿಯವರು. ಆಕೆಯು ಯಾಕೋಬನಿಗೆ ಇವರನ್ನೂ, ದೀನಳೆಂಬ ಹೆಣ್ಣು ಮಗಳನ್ನೂ ಪದ್ದನ್ ಅರಾಮಿನಲ್ಲಿ ಪಡೆದಳು. ಆಕೆಯಿಂದ ಹುಟ್ಟಿದ ಗಂಡು ಹೆಣ್ಣು ಮಕ್ಕಳು ಮೂವತ್ತು ಮೂರು ಮಂದಿ.
Kannada BSI Bible 2016
ಇವರು ಲೇಯಳ ಮಕ್ಕಳು. ಆಕೆಯು ಇವರನ್ನೂ ತನ್ನ ಮಗಳಾದ ದೀನಳನ್ನೂ ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹೆತ್ತಳು. ಅವನ ಕುಮಾರರೂ ಕುಮಾರ್ತೆಯರೂ ಎಲ್ಲಾ ಮೂವತ್ತು ಮೂರು ಮಂದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆಯು ಯಾಕೋಬನಿಗೆ ಇವರನ್ನೂ ದೀನಳೆಂಬ ಹೆಣ್ಣುಮಗಳನ್ನೂ ಪದ್ದನ್ಅರಾವಿುನಲ್ಲಿ ಪಡೆದಳು. ಆಕೆಯಿಂದಾದ ಗಂಡು ಹೆಣ್ಣು ಮಕ್ಕಳು ಮೂವತ್ತು ಮೂರು ಮಂದಿ.
Kannada Bible (KNCL) BSI 2016
ಇವರೆಲ್ಲರು ಲೇಯಳ ಸಂತತಿಯವರು. ಆಕೆ ಯಕೋಬನಿಗೆ ಇವರನ್ನಲ್ಲದೆ ದೀನಳೆಂಬ ಮಗಳನ್ನೂ ಮೆಸಪೊಟೇಮಿಯಾದಲ್ಲಿ ಪಡೆದಳು. ಆಕೆಯಿಂದಾದ ಗಂಡು ಹೆಣ್ಣು ಮಕ್ಕಳು ಒಟ್ಟು ಮೂವತ್ತು ಮಂದಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರು ಲೇಯಳ ಮಕ್ಕಳು. ಆಕೆಯು ಇವರನ್ನೂ, ತನ್ನ ಮಗಳಾದ ದೀನಳನ್ನೂ ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹೆತ್ತಳು. ಅವನ ಪುತ್ರಪುತ್ರಿಯರೆಲ್ಲಾ ಸೇರಿ ಒಟ್ಟು ಮೂವತ್ತು ಮೂರು ಮಂದಿ.