Genesis 46:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಲಾಬಾನನು ತನ್ನ ಮಗಳಾದ ಲೇಯಳಿಗೆ ಜಿಲ್ಪ ಎಂಬ ದಾಸಿಯನ್ನು ಕೊಟ್ಟಿದ್ದನು. ಲೇಯಾಳು ಜಿಲ್ಪಳನ್ನು ಯಾಕೋಬನಿಗೆ ಕೊಟ್ಟಿದ್ದಳು. ಜಿಲ್ಪಳ ಕುಟುಂಬದಲ್ಲಿ ಒಟ್ಟು ಹದಿನಾರು ಮಂದಿಯಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರೆಲ್ಲರು ಲಾಬಾನನು ತನ್ನ ಮಗಳಾದ ಲೇಯಳಿಗೆ ಕೊಟ್ಟ ಜಿಲ್ಪಳ ಸಂತತಿಯವರು. ಈಕೆಯಿಂದ ಯಾಕೋಬನಿಗಾದ ಮಕ್ಕಳೂ ಮೊಮ್ಮಕ್ಕಳೂ ಹದಿನಾರು ಮಂದಿ.
Kannada BSI Bible 2016
ಲಾಬಾನನು ತನ್ನ ಮಗಳಾದ ಲೇಯಳಿಗೆ ಕೊಟ್ಟ ಜಿಲ್ಪಳ ಮಕ್ಕಳು ಇವರೇ. ಹದಿನಾರು ಮಂದಿಯಾಗಿದ್ದ ಇವರನ್ನು ಆಕೆಯು ಯಾಕೋಬನಿಗೆ ಹೆತ್ತಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರು ಲಾಬಾನನು ತನ್ನ ಮಗಳಾದ ಲೇಯಳಿಗೆ ಕೊಟ್ಟ ಜಿಲ್ಪಳ ಸಂತತಿಯವರು. ಈಕೆಯಿಂದ ಯಾಕೋಬನಿಗಾದ ಮಕ್ಕಳೂ ಮೊಮ್ಮಕ್ಕಳೂ ಹದಿನಾರು ಮಂದಿ.
Kannada Bible (KNCL) BSI 2016
ಇವರು ಲಾಬಾನನು ತನ್ನ ಮಗಳಾದ ಲೇಯಳಿಗೆ ದಾಸಿಯಾಗಿ ಕೊಟ್ಟ ಜಿಲ್ಪಳ ಸಂತತಿಯವರು. ಈಕೆಯಿಂದ ಯಕೋಬನಿಗಾದ ಮಕ್ಕಳು ಮತ್ತು ಮೊಮ್ಮಕ್ಕಳು ಒಟ್ಟು ಹದಿನಾರು ಮಂದಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲಾಬಾನನು ತನ್ನ ಮಗಳಾದ ಲೇಯಳಿಗೆ ಕೊಟ್ಟ ಜಿಲ್ಪಳ ಮಕ್ಕಳು ಇವರೇ. ಈಕೆಯಿಂದ ಯಾಕೋಬನಿಗಾದ ಮಕ್ಕಳು ಮತ್ತು ಮೊಮ್ಮಕ್ಕಳು ಒಟ್ಟು ಹದಿನಾರು ಮಂದಿ.