Genesis 46:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಜಿಪ್ಟಿನಲ್ಲಿ ಯೋಸೇಫನಿಗೆ ಇಬ್ಬರು ಗಂಡುಮಕ್ಕಳಿದ್ದರು. ಅವರು ಯಾರೆಂದರೆ: ಮನಸ್ಸೆ ಮತ್ತು ಎಫ್ರಾಯೀಮ್. (ಯೋಸೇಫನ ಹೆಂಡತಿ ‘ಆಸನತ್’ ಈಕೆ ಓನ್ ಪಟ್ಟಣದ ಆಚಾರ್ಯನಾಗಿದ್ದ ಫೋಟೀಫರನ ಮಗಳು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐಗುಪ್ತ ದೇಶದಲ್ಲಿ ಯೋಸೇಫನಿಗೆ ಓನ್ ಪಟ್ಟಣದ ಪುರೋಹಿತನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದವರು ಮನಸ್ಸೆ ಮತ್ತು ಎಫ್ರಾಯೀಮ್.
Kannada BSI Bible 2016
ಯೋಸೇಫನಿಗೆ ಐಗುಪ್ತ ದೇಶದಲ್ಲಿ ಮಕ್ಕಳು ಹುಟ್ಟಿದರು: ಓನಿನ ಯಾಜಕನಾಗಿರುವ ಪೋಟೀಫೆರನ ಮಗಳಾದ ಆಸನತಳು ಮನಸ್ಸೆಯನ್ನೂ ಎಫ್ರಾಯಾಮ ನನ್ನೂ ಅವನಿಗೆ ಹೆತ್ತಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಐಗುಪ್ತದೇಶದಲ್ಲಿ ಯೋಸೇಫನಿಗೆ ಓನ್ ಪಟ್ಟಣದ ಆಚಾರ್ಯನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದ ಮನಸ್ಸೆ ಎಫ್ರಾಯೀಮ್;
Kannada Bible (KNCL) BSI 2016
ಈಜಿಪ್ಟಿನಲ್ಲಿ ಜೋಸೆಫನಿಗೆ ಓನ್ ಪಟ್ಟಣದ ಆಚಾರ್ಯ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದ ಮನಸ್ಸೆ ಮತ್ತು ಎಫ್ರಯಿಮ್.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಸೇಫನಿಗೆ ಈಜಿಪ್ಟ್ ದೇಶದಲ್ಲಿ ಮಕ್ಕಳು ಹುಟ್ಟಿದರು. ಓನ್ ಪಟ್ಟಣದ ಯಾಜಕನಾಗಿರುವ ಪೋಟೀಫೆರನ ಮಗಳಾದ ಆಸನತ್ ಮನಸ್ಸೆಯನ್ನೂ, ಎಫ್ರಾಯೀಮನನ್ನೂ ಅವನಿಗೆ ಹೆತ್ತಳು.