Genesis 46:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲಿ ಯೋಸೇಫನ ಇಬ್ಬರು ಗಂಡುಮಕ್ಕಳು ಸಹ ಇದ್ದರು. ಅವರು ಈಜಿಪ್ಟಿನಲ್ಲಿ ಹುಟ್ಟಿದವರು. ಆದ್ದರಿಂದ ಈಜಿಪ್ಟಿಗೆ ಬಂದ ಯಾಕೋಬನ ಕುಟುಂಬದವರು ಒಟ್ಟು ಎಪ್ಪತ್ತು ಮಂದಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಲ್ಲದೆ ಐಗುಪ್ತ ದೇಶದಲ್ಲಿ ಯೋಸೇಫನಿಗೆ ಹುಟ್ಟಿದವರು ಇಬ್ಬರು. ಐಗುಪ್ತ ದೇಶಕ್ಕೆ ಹೋದ ಯಾಕೋಬನ ಕುಟುಂಬದವರೆಲ್ಲರು ಒಟ್ಟು ಎಪ್ಪತ್ತು ಮಂದಿ.
Kannada BSI Bible 2016
ಇದಲ್ಲದೆ ಐಗುಪ್ತದಲ್ಲಿ ಯೋಸೇಫನಿಗೆ ಇಬ್ಬರು ಕುಮಾರರು ಹುಟ್ಟಿದರು. ಯಾಕೋಬನ ಮನೆಯವರಾಗಿ ಐಗುಪ್ತಕ್ಕೆ ಬಂದ ಜನರೆಲ್ಲಾ ಸೇರಿ ಒಟ್ಟು ಎಪ್ಪತ್ತು ಮಂದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಲ್ಲದೆ ಐಗುಪ್ತದೇಶದಲ್ಲಿ ಯೋಸೇಫನಿಗೆ ಹುಟ್ಟಿದವರು ಇಬ್ಬರು. ಐಗುಪ್ತದೇಶಕ್ಕೆ ಹೋದ ಯಾಕೋಬನ ಕುಟುಂಬದವರೆಲ್ಲರು ಒಟ್ಟಾಗಿ ಎಪ್ಪತ್ತು ಮಂದಿ.
Kannada Bible (KNCL) BSI 2016
ಅವರಲ್ಲದೆ ಈಜಿಪ್ಟ್ ದೇಶದಲ್ಲಿ ಜೋಸೆಫನಿಗೆ ಹುಟ್ಟಿದವರು ಇಬ್ಬರು. ಈಜಿಪ್ಟ್ ದೇಶಕ್ಕೆ ಹೋದ ಯಕೋಬನ ಕುಟುಂಬದವರೆಲ್ಲರು ಒಟ್ಟಾಗಿ ಎಪ್ಪತ್ತು ಮಂದಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಲ್ಲದೆ ಈಜಿಪ್ಟಿನಲ್ಲಿ ಯೋಸೇಫನಿಗೆ ಇಬ್ಬರು ಪುತ್ರರು ಹುಟ್ಟಿದರು. ಯಾಕೋಬನ ಮನೆಯವರಾಗಿ ಈಜಿಪ್ಟಿಗೆ ಹೋದ ಜನರೆಲ್ಲಾ ಸೇರಿ ಒಟ್ಟು ಎಪ್ಪತ್ತು ಮಂದಿ.