Genesis 46:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೋಬನು ಮೊದಲು ಯೆಹೂದನನ್ನು ಯೋಸೇಫನ ಬಳಿಗೆ ಕಳುಹಿಸಿದನು. ಗೋಷೆನ್ ಪ್ರಾಂತ್ಯದಲ್ಲಿ ಯೆಹೂದನು ಯೋಸೇಫನ ಬಳಿಗೆ ಹೋದನು. ಆಮೇಲೆ ಯಾಕೋಬ ಮತ್ತು ಅವನ ಮಕ್ಕಳು ಆ ಪ್ರಾಂತ್ಯಕ್ಕೆ ಬಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬನು ಗೋಷೆನ್ ಸೀಮೆಯ ದಾರಿಯನ್ನು ವಿಚಾರಿಸುವುದಕ್ಕೆ ಯೆಹೂದನನ್ನು ಮುಂದಾಗಿ ಯೋಸೇಫನ ಬಳಿಗೆ ಕಳುಹಿಸಿದನು. ಅವರು ಗೋಷೆನ್ ಸೀಮೆಗೆ ಬಂದಾಗ,
Kannada BSI Bible 2016
ಇದಲ್ಲದೆ ಗೋಷೆನಿಗೆ ಮಾರ್ಗವನ್ನು ತೋರಿ ಸುವ ಹಾಗೆ ಅವನು ಯೆಹೂದನನ್ನು ತನ್ನ ಮುಂದಾಗಿ ಯೋಸೇಫನ ಬಳಿಗೆ ಕಳುಹಿಸಿದನು. ಅವರು ಗೋಷೆನ್‌ ದೇಶಕ್ಕೆ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬನು ಗೋಷೆನ್‍ಸೀಮೆಯ ದಾರೀ ವಿಚಾರಿಸುವದಕ್ಕೆ ಯೆಹೂದನನ್ನು ಮುಂದಾಗಿ ಯೋಸೇಫನ ಬಳಿಗೆ ಕಳುಹಿಸಿದನು.
Kannada Bible (KNCL) BSI 2016
ಗೋಷೆನ್ ಪ್ರಾಂತದಲ್ಲಿ ಜೋಸೆಫ್ ತನ್ನನ್ನು ಭೇಟಿಯಾಗಬೇಕೆಂದು ತಿಳಿಸಲು ಯಕೋಬನು ಯೆಹೂದನನ್ನು ಮುಂದಾಗಿ ಜೋಸೆಫನ ಬಳಿಗೆ ಕಳಿಸಿದನು. ಅವರೆಲ್ಲರು ಗೋಷೆನ್ ಪ್ರಾಂತ್ಯವನ್ನು ಬಂದು ಸೇರಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಗೋಷೆನ್ ಪ್ರಾಂತಕ್ಕೆ ಮಾರ್ಗವನ್ನು ತೋರಿಸುವಂತೆ ಯಾಕೋಬನು ಯೆಹೂದನನ್ನು ತನ್ನ ಮುಂದಾಗಿ ಯೋಸೇಫನ ಬಳಿಗೆ ಕಳುಹಿಸಿದನು. ಅವರು ಗೋಷೆನ್ ಪ್ರಾಂತಕ್ಕೆ ಬಂದು ಸೇರಿದರು.