Genesis 46:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಅವನಿಗೆ, ‘ನಾವು ಕುರುಬರು. ನಮ್ಮ ಜೀವಮಾನವೆಲ್ಲಾ ನಾವು ಪಶುಗಳನ್ನು ಸಾಕುವುದರ ಮೂಲಕ ಜೀವನ ಮಾಡಿದೆವು. ನಮಗಿಂತ ಮೊದಲು ನಮ್ಮ ಪೂರ್ವಿಕರು ಸಹ ಇದೇ ರೀತಿ ಜೀವಿಸಿದರು’ ಎಂದು ಹೇಳಿರಿ. ಆಗ ಅವನು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲು ನಿಮಗೆ ಅವಕಾಶ ಮಾಡಿಕೊಡುತ್ತಾನೆ. ಈಜಿಪ್ಟಿನ ಜನರು ಕುರುಬರನ್ನು ಇಷ್ಟಪಡುವುದಿಲ್ಲ. ಆದ್ದರಿಂದ ನೀವು ಗೋಷೆನಿನಲ್ಲಿ ವಾಸಿಸುವುದು ಒಳ್ಳೆಯದು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀವು ಚಿಕ್ಕಂದಿನಿಂದ ಇದುವರೆಗೂ ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಪದ್ಧತಿಯ ಮೇರೆಗೆ ಪಶುಪಾಲಕರು ಎಂದು ಹೇಳಿರಿ. ಪಶುಪಾಲಕರು ಐಗುಪ್ತರಿಗೆ ಅಸಹ್ಯವಾಗಿರುವುದರಿಂದ, ಗೋಷೆನ್ ಸೀಮೆಯನ್ನು ನಿಮ್ಮ ನಿವಾಸಕ್ಕಾಗಿ ನೇಮಿಸುವನು” ಎಂದನು.
Kannada BSI Bible 2016
ಗೋಷೆನ್ ದೇಶದಲ್ಲಿ ವಾಸವಾಗಿರು ವಂತೆ ನೀವು ಅವನಿಗೆ--ಚಿಕ್ಕಂದಿನಿಂದ ಇಂದಿನ ವರೆಗೂ ನಿನ್ನ ದಾಸರಾದ ನಾವೂ ನಮ್ಮ ತಂದೆಗಳೂ ಮಂದೆಯನ್ನು ಕಾಯುವವರಾಗಿದ್ದೇವೆ ಎಂದು ಹೇಳ ಬೇಕು. ಯಾಕಂದರೆ ಕುರಿಕಾಯುವವರೆಲ್ಲಾ ಐಗುಪ್ತ್ಯ ರಿಗೆ ಅಸಹ್ಯವಾಗಿದ್ದಾರೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು - ಚಿಕ್ಕಂದಿನಿಂದ ಇದುವರೆಗೂ ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಪದ್ಧತಿಯ ಮೇರೆಗೆ ಪಶುಪಾಲಕರು ಅನ್ನಿರಿ. ಪಶುಪಾಲಕರು ಐಗುಪ್ತ್ಯರಿಗೆ ಅಸಹ್ಯವಾಗಿರುವದರಿಂದ ಗೋಷೆನ್‍ಸೀಮೆಯನ್ನು ನಿಮ್ಮ ನಿವಾಸಕ್ಕೆ ನೇವಿುಸುವನು ಅಂದನು.
Kannada Bible (KNCL) BSI 2016
'ಚಿಕ್ಕಂದಿನಿಂದ ಇಂದಿನವರೆಗೂ ನಿಮ್ಮ ಸೇವಕರಾದ ನಾವು, ನಮ್ಮ ಪೂರ್ವಜರ ಪದ್ಧತಿಯಂತೆ ಮಂದೆ ಮೇಯಿಸುವವರು,’ ಎಂದು ಹೇಳಿರಿ. ಆಗ ಗೋಷೆನ್ ಪ್ರಾಂತ್ಯವನ್ನು ನಿಮ್ಮ ನಿವಾಸಕ್ಕೆ ನೇಮಿಸುವನು - ಏಕೆಂದರೆ ಕುರಿ ಕಾಯುವವರೆಂದರೆ ಈಜಿಪ್ಟಿಯರಿಗೆ ಹಿಡಿಸದು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಅವನಿಗೆ, ‘ಚಿಕ್ಕಂದಿನಿಂದ ಇಂದಿನವರೆಗೂ ನಿನ್ನ ದಾಸರಾದ ನಾವೂ ನಮ್ಮ ಪೂರ್ವಿಕರೂ ಪಶುಗಳನ್ನು ಕಾಯುವವರಾಗಿದ್ದೇವೆ,’ ಎಂದು ಹೇಳಬೇಕು. ಏಕೆಂದರೆ ಕುರಿ ಕಾಯುವವರೆಲ್ಲಾ ಈಜಿಪ್ಟಿನವರಿಗೆ ಅಸಹ್ಯವಾಗಿದ್ದರಿಂದ, ನೀವು ಗೋಷೆನ್ ಪ್ರಾಂತದಲ್ಲಿ ವಾಸವಾಗಿರುವಂತೆ ನೇಮಿಸುವನು,” ಎಂದನು.