Genesis 46:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೇಲೆ ಯಾಕೋಬನು ಬೇರ್ಷೆಬವನ್ನು ಬಿಟ್ಟು ಈಜಿಪ್ಟಿಗೆ ಪ್ರಯಾಣ ಮಾಡಿದನು. ಇಸ್ರೇಲನ ಗಂಡುಮಕ್ಕಳು ತಮ್ಮ ತಂದೆಯನ್ನೂ ತಮ್ಮ ಹೆಂಡತಿಯರನ್ನೂ ತಮ್ಮ ಎಲ್ಲಾ ಮಕ್ಕಳನ್ನೂ ಕರೆದುಕೊಂಡು ಹೋದರು. ಫರೋಹನು ಕಳುಹಿಸಿದ್ದ ರಥಗಳಲ್ಲಿ ಅವರು ಪ್ರಯಾಣ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಳಿಕ ಯಾಕೋಬನು ಬೇರ್ಷೆಬದಿಂದ ಹೊರಟನು. ಫರೋಹನು ಅವನನ್ನು ಕರೆದುಕೊಂಡು ಬರುವುದಕ್ಕೆ ಕಳುಹಿಸಿದ್ದ ರಥಗಳಲ್ಲಿ ಇಸ್ರಾಯೇಲನ ಮಕ್ಕಳು, ತಮ್ಮ ತಂದೆಯಾದ ಯಾಕೋಬನನ್ನೂ, ಹೆಂಡತಿ ಮಕ್ಕಳನ್ನೂ ಕುಳ್ಳಿರಿಸಿಕೊಂಡು ಹೊರಟರು.
Kannada BSI Bible 2016
ಆಗ ಯಾಕೋಬನು ಎದ್ದು ಬೇರ್ಷೆಬದಿಂದ ಹೊರಟನು. ಇಸ್ರಾಯೇಲನ ಮಕ್ಕಳು ತಮ್ಮ ತಂದೆಯಾದ ಯಾಕೋಬನನ್ನೂ ತಮ್ಮ ಚಿಕ್ಕವರನ್ನೂ ತಮ್ಮ ಹೆಂಡತಿಯರನ್ನೂ ಫರೋಹನು ಕಳುಹಿಸಿದ ಬಂಡಿಗಳ ಮೇಲೆ ಏರಿಸಿಕೊಂಡು ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಳಿಕ ಯಾಕೋಬನು ಬೇರ್ಷೆಬದಿಂದ ಹೊರಟನು. ಫರೋಹನು ಅವನನ್ನು ಕರಕೊಂಡು ಬರುವದಕ್ಕೆ ಕಳುಹಿಸಿದ್ದ ರಥಗಳ ಮೇಲೆ ಇಸ್ರಾಯೇಲನ ಮಕ್ಕಳು ತಮ್ಮ ತಂದೆಯಾದ ಯಾಕೋಬನನ್ನೂ ಹೆಂಡತಿ ಮಕ್ಕಳನ್ನೂ ಕುಳ್ಳಿರಿಸಿಕೊಂಡು ಹೊರಟರು.
Kannada Bible (KNCL) BSI 2016
ಬಳಿಕ ಯಕೋಬನು ಬೇರ್ಷೆಬದಿಂದ ಪ್ರಯಾಣ ಮಾಡಿದನು. ಯಕೋಬನ ಮಕ್ಕಳು ತಮ್ಮ ತಂದೆಯಾದ ಯಕೋಬನನ್ನು ಮತ್ತು ತಮ್ಮ ಮಡದಿಮಕ್ಕಳನ್ನು ಫರೋಹನು ಕಳಿಸಿದ್ದ ಬಂಡಿಗಳಲ್ಲಿ ಕೂರಿಸಿಕೊಂಡು ಹೊರಟರು..
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯಾಕೋಬನು ಎದ್ದು ಬೇರ್ಷೆಬದಿಂದ ಹೊರಟನು. ಆಗ ಇಸ್ರಾಯೇಲರು ತಮ್ಮ ತಂದೆ ಯಾಕೋಬನನ್ನೂ, ತಮ್ಮ ಮಕ್ಕಳನ್ನೂ, ತಮ್ಮ ಹೆಂಡತಿಯರನ್ನೂ ಫರೋಹನು ಕಳುಹಿಸಿದ ರಥಗಳಲ್ಲಿ ಕೂರಿಸಿಕೊಂಡು ಹೋದರು.