Genesis 46:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದಲ್ಲದೆ ಅವರು ತಮ್ಮ ದನಕರುಗಳನ್ನೂ ಕಾನಾನ್ ದೇಶದಲ್ಲಿ ತಾವು ಹೊಂದಿದ್ದ ಪ್ರತಿಯೊಂದನ್ನೂ ತೆಗೆದುಕೊಂಡು ಹೋದರು. ಹೀಗೆ ಇಸ್ರೇಲನು ತನ್ನ ಎಲ್ಲಾ ಮಕ್ಕಳೊಂದಿಗೆ ಮತ್ತು ತನ್ನ ಕುಟುಂಬದೊಂದಿಗೆ ಈಜಿಪ್ಟಿಗೆ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬನೂ, ಅವನ ಮನೆಯವರೆಲ್ಲರೂ ತಮ್ಮ ದನಕುರಿಗಳನ್ನೂ ತಾವು ಕಾನಾನ್ ದೇಶದಲ್ಲಿ ಸಂಪಾದಿಸಿಕೊಂಡಿದ್ದ ಸಂಪತ್ತುಗಳನ್ನೂ ತೆಗೆದುಕೊಂಡು ಐಗುಪ್ತ ದೇಶವನ್ನು ತಲುಪಿದರು.
Kannada BSI Bible 2016
ಅವರು ತಮ್ಮ ದನಗಳನ್ನೂ ಕಾನಾನ್ ದೇಶದಲ್ಲಿ ತಾವು ಸಂಪಾದಿಸಿದ ತಮ್ಮ ಸಂಪತ್ತನ್ನೂ ತಕ್ಕೊಂಡು ಐಗುಪ್ತಕ್ಕೆ ಬಂದರು. ಯಾಕೋಬನು ತನ್ನ ಎಲ್ಲಾ ಸಂತತಿಯೊಂದಿಗೆ ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬನೂ ಅವನ ಮನೆತನದವರೆಲ್ಲರೂ ತಮ್ಮ ದನಕುರಿಗಳನ್ನೂ ತಾವು ಕಾನಾನ್‍ದೇಶದಲ್ಲಿ ಸಂಪಾದಿಸಿಕೊಂಡಿದ್ದ ಸೊತ್ತುಗಳನ್ನೂ ತೆಗೆದುಕೊಂಡು ಐಗುಪ್ತದೇಶವನ್ನು ತಲಪಿದರು.
Kannada Bible (KNCL) BSI 2016
ಕಾನಾನ್ ನಾಡಿನಲ್ಲಿ ತಾವು ಸಂಪಾದಿಸಿದ್ದ ಆಸ್ತಿಪಾಸ್ತಿಯನ್ನೂ ದನಕುರಿಗಳನ್ನೂ ತೆಗೆದುಕೊಂಡು ಈಜಿಪ್ಟ್ ದೇಶವನ್ನು ತಲುಪಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ತಮ್ಮ ಪಶುಗಳನ್ನೂ ಕಾನಾನ್ ದೇಶದಲ್ಲಿ ತಾವು ಸಂಪಾದಿಸಿದ ತಮ್ಮ ಸಂಪತ್ತನ್ನೂ ತೆಗೆದುಕೊಂಡು ಈಜಿಪ್ಟಿಗೆ ಬಂದರು. ಯಾಕೋಬನು ತನ್ನ ಕುಟುಂಬ ಸಮೇತವಾಗಿ ಬಂದನು.