Genesis 46:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನ ಜೊತೆಯಲ್ಲಿ ಅವನ ಗಂಡುಮಕ್ಕಳು, ಹೆಣ್ಣುಮಕ್ಕಳು ಮತ್ತು ಮೊಮ್ಮಕ್ಕಳು ಇದ್ದರು. ಅವನ ಸಂಸಾರದವರೆಲ್ಲ ಅವನ ಜೊತೆ ಈಜಿಪ್ಟಿಗೆ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಯಾಕೋಬನು ತನ್ನ ಗಂಡು ಹೆಣ್ಣು ಮಕ್ಕಳನ್ನೂ, ಮೊಮ್ಮಕ್ಕಳನ್ನೂ, ತನ್ನ ಮನೆಯವರೆಲ್ಲರನ್ನೂ ತನ್ನ ಸಂಗಡಲೇ ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದನು.
Kannada BSI Bible 2016
ತನ್ನ ಕುಮಾರ ರನ್ನೂ ಕುಮಾರರ ಕುಮಾರರನ್ನೂ ಕುಮಾರ್ತೆಯರನ್ನೂ ಕುಮಾರರ ಕುಮಾರ್ತೆಯರನ್ನೂ ಅಂತೂ ತನ್ನ ಸಂತತಿ ಯನ್ನೆಲ್ಲಾ ತನ್ನೊಂದಿಗೆ ಐಗುಪ್ತಕ್ಕೆ ಕರಕೊಂಡು ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಯಾಕೋಬನು ತನ್ನ ಗಂಡು ಹೆಣ್ಣು ಮಕ್ಕಳನ್ನೂ ಮೊಮ್ಮಕ್ಕಳನ್ನೂ ತನ್ನ ಮನೆತನದವರೆಲ್ಲರನ್ನೂ ತನ್ನ ಸಂಗಡಲೇ ಐಗುಪ್ತದೇಶಕ್ಕೆ ಕರಕೊಂಡು ಹೋದನು.
Kannada Bible (KNCL) BSI 2016
ಹೀಗೆ ಯಕೋಬನು ತನ್ನ ಗಂಡು ಹೆಣ್ಣು ಮಕ್ಕಳನ್ನೂ ಮೊಮ್ಮಕ್ಕಳನ್ನೂ ತನ್ನ ಕುಟುಂಬದವರೆಲ್ಲರನ್ನೂ ತನ್ನ ಸಂಗಡವೇ ಕರೆದುಕೊಂಡು ಈಜಿಪ್ಟಿಗೆ ಬಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ತನ್ನ ಗಂಡು ಹೆಣ್ಣು ಮಕ್ಕಳನ್ನೂ, ಮೊಮ್ಮೊಕ್ಕಳನ್ನೂ, ಅಂತೂ ತನ್ನ ಇಡೀ ಕುಟುಂಬದವರೆಲ್ಲರನ್ನೂ ತನ್ನೊಂದಿಗೆ ಈಜಿಪ್ಟಿಗೆ ಕರೆದುಕೊಂಡು ಹೋದನು.